ರಾಜ್ಯ ಸರ್ಕಾರದ ವಿವಿಧ ನಿಗಮಗಳಲ್ಲಿ ಹುದ್ದೆಗಳು; ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

KEA
Published on

ಬೆಂಗಳೂರು: ರಾಜ್ಯದ ಸರ್ಕಾರಿ ಇಲಾಖೆಯ ವಿವಿಧ ನಿಗಮಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಜು.31ರವರೆಗೆ ವಿಸ್ತರಿಸಿದೆ.

ರಾಜ್ಯದ ವಿದ್ಯುನ್ಮಾನ ಅಭಿವೃದ್ಧಿ ನಿಗಮ, ಆಹಾರ ಮತ್ತು ನಾಗರಿಕ ಸರಬರಾಜು ನಿಗಮ, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ಮೈಸೂರು ಸೇಲ್ಸ್ ಇಂಟರ್ ನ್ಯಾಷನಲ್ ಲಿ., ಸಂಸ್ಥೆಗಳಲ್ಲಿ ಖಾಲಿ ಇರುವ ಮಿಕ್ಕುಳಿದ/ವೃಂದ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶ (ಸ್ಳಳೀಯ) ವೃಂದದ ವಿವಿಧ ಹುದ್ದೆಗಳಿಗೆ ನೇರ ನೇಮಕಾತಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಲು ಜು.22 ಕೊನೆಯ ದಿನವಾಗಿತ್ತು. ಅವಧಿಯನ್ನು ವಿಸ್ತರಿಸುವಂತೆ ಅಭ್ಯರ್ಥಿಗಳು ಮನವಿ ಮಾಡಿರುವ ಹಿನ್ನೆಲೆಯಲ್ಲಿ ಅರ್ಜಿ ಸಲ್ಲಿಸಲು ಜು.31ರ ಸಂಜೆ 5.30ರ ವರೆಗೆ ಮತ್ತು ಶುಲ್ಕ ಪಾವತಿಸಲು ಆ.3ರ ಸಂಜೆ 3.30ರ ವರೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಕೆಇಎ ಕಾರ್ಯ ನಿರ್ವಾಹಕರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net