ವಿದ್ಯುತ್ ಮಾರಾಟದಿಂದ ಹೆಚ್ಚು ಲಾಭ ಮಾಡಿಕೊಳ್ಳಲು ಇಂಧನ ಇಲಾಖೆ ಪ್ಲಾನ್

Women empowerment
Published on

ಬೆಂಗಳೂರು:
ವಿದ್ಯುತ್ ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿರುವ ರಾಜ್ಯ, ಈ ವರ್ಷ ಹೆಚ್ಚುವರಿ ವಿದ್ಯುತ್‌ನ್ನು ಹೊರ ರಾಜ್ಯಗಳಿಗೆ ಮಾರಾಟ ಮಾಡಿ ಲಾಭಗಳಿಸುವ ನಿಟ್ಟಿನಲ್ಲಿ ಯೋಜನೆ ರೂಪಿಸಿಕೊಂಡಿದೆ.
ರಾಜ್ಯದಲ್ಲಿ ಉತ್ತಮ ಮಳೆ ಆಗಿರುವುದರಿಂದ ಎಲ್ಲಾ ಜಲ ವಿದ್ಯುತ್ ಯೋಜನೆಗಳ ಅಣೆಕಟ್ಟುಗಳು ತುಂಬಿಕೊಂಡಿವೆ. ರಾಜ್ಯಕ್ಕೆ ಜಲ ವಿದ್ಯುತ್ ಯೋಜನೆಯಲ್ಲಿ ಹೆಚ್ಚು ವಿದ್ಯುತ್ ಉತ್ಪಾದನೆ ಮಾಡುವ ಮೂಲಕ ಗ್ರಾಹಕರಿಗೆ ಕಡಿಮೆ ವೆಚ್ಚದಲ್ಲಿ ವಿದ್ಯುತ್ ಸರಬರಾಜು ಮಾಡಲು ಸಾಧ್ಯವಿದೆ. ಅಲ್ಲದೆ, ಸೋಲಾರ್ ಮತ್ತು ಪವನ ವಿದ್ಯುತ್ ಕೂಡ ಲಭ್ಯವಿದೆ. ಉಷ್ಣ ವಿದ್ಯುತ್ ಸ್ಥಾವರಗಳಲ್ಲಿ ಉತ್ಪಾದನೆ ಆಗುವ ವಿದ್ಯುತ್ ಸೇರಿದಂತೆ ರಾಜ್ಯದ ಬೇಡಿಕೆಗಿಂತಲೂ ಹೆಚ್ಚಾಗಿ ವಿದ್ಯುತ್ ಲಭ್ಯವಿದೆ.
ಮುಂದಿನ ಮಳೆಗಾಲದ ತನಕ ಯೋಜನೆ ರೂಪಿಸಿಕೊಂಡು ಹೆಚ್ಚುವರಿಯಾಗಿ ಉತ್ಪತ್ತಿಯಾಗುವ ವಿದ್ಯುತ್‌ನ್ನು ಮಾರುಕಟ್ಟೆಯಲ್ಲಿ ಬೇಡಿಕೆ ಅನುಸಾರ ಉತ್ತಮ ಬೆಲೆಗೆ ಮಾರಾಟ ಮಾಡಿ ಲಾಭ ಮಾಡಿಕೊಳ್ಳಲು ಇಂಧನ ಇಲಾಖೆ ಮುಂದಾಗಿದೆ.
ಕಳೆದ ಮೇ 18 ರಿಂದ ಈ ತನಕ ಹೊರ ರಾಜ್ಯಗಳಿಗೆ 1,403 ಕೋಟಿ ರೂ. ಬೆಲೆಯ ವಿದ್ಯುತ್‌ನ್ನು ಈಗಾಗಲೇ ಮಾರಾಟ ಮಾಡಲಾಗಿದೆ. ಸರಾಸರಿ ಪ್ರತಿನಿತ್ಯ 30 ರಿಂದ 40 ಮಿಲಿಯನ್ ಯೂನಿಟ್ (ಎಂಯು)ವಿದ್ಯುತ್ ಮಾರಾಟ ಮಾಡಲಾಗುತ್ತಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net