

ಪ್ರಭಾಸ್ ಸದ್ಯ ಪ್ಯಾನ್ ಇಂಡಿಯಾ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದು, ಪ್ರಭಾಸ್ ಮತ್ತೊಂದು ದೊಡ್ಡ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಪ್ಯಾನ್ ವರ್ಲ್ಡ್ ಚಿತ್ರವಾಗಿ ನಾಗ್ ಅಶ್ವಿನ್ ನಿರ್ದೇಶನದ ಈ ಚಿತ್ರ ತೆರೆಗೆ ಅಪ್ಪಳಿಸಲು ರೆಡಿಯಾಗಿದ್ದು, ಪ್ರಭಾಸ್ ಗೆ ನಾಯಕಿಯಾಗಿ ದೀಪಿಕಾ ಪಡುಕೋಣೆ ನಟಿಸಿದ್ದಾರೆ.
ಅಮಿತಾಬ್ ಬಚ್ಚನ್ ಸಹ ಈ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಚಿತ್ರದಲ್ಲಿ ಪ್ರಭಾಸ್ ಗೆ ನಾಯಕಿಯಾಗಿ ದೀಪಿಕಾ ಪಡುಕೋಣೆ ನಟಿಸಿದ್ದು, ಪ್ರಭಾಸ್ ಹುಟ್ಟುಹಬ್ಬದ ಉಡುಗೊರೆಯಾಗಿ ನಿನ್ನೆ ಈ ಚಿತ್ರದ ಹೊಸ ಅಪ್ಡೇಟ್ಗಾಗಿ ಎಲ್ಲರೂ ಕುತೂಹಲದಿಂದ ಕಾಯುತ್ತಿದ್ದರು.
ಆದರೆ ಅಭಿಮಾನಿಗಳಿಗೆ ಅಂತಹ ಯಾವುದೇ ಪ್ರಮುಖ ಅಪ್‌ಡೇಟ್‌ನ್ನು ನೀಡಲಾಗಿಲ್ಲ.
ಆದರೆ ದೊಡ್ಡ ಬಜೆಟ್‌ನಲ್ಲಿ ತಯಾರಾಗಿರುವ ಈ ಸಿನಿಮಾದಲ್ಲಿ ಕಮಲ್ ಹಾಸನ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಇದಲ್ಲದೇ ಈ ಸಿನಿಮಾದಲ್ಲಿ ಟಾಪ್ ನಿರ್ದೇಶಕ ರಾಜಮೌಳಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದ್ದು, ಇದಕ್ಕೆ ಸಂಬಂಧ ಪಟ್ಟಂತೆ ಸುದ್ದಿಯೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಕಲ್ಕಿ 2898 ರ ನಿರ್ಮಾಪಕರು ಈ ಚಿತ್ರವನ್ನು ಮುಂದಿನ ವರ್ಷ ಮೇ 9 ರಂದು ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ ಎಂದು ಹೇಳಲಾಗುತ್ತಿದೆ. ಪ್ರಭಾಸ್ ಕರ್ಣನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.
ಸಿನಿಮಾದಲ್ಲಿ ಟಾಪ್ ನಿರ್ದೇಶಕ ರಾಜಮೌಳಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರಂತೆ. ಈ ಚಿತ್ರದಲ್ಲಿ ಅವರು 10 ನಿಮಿಷಗಳ ಕಾಲ ಕಾಣಿಸಿಕೊಳ್ಳಲಿದ್ದಾರೆ ಎಂಬ ಸುದ್ದಿಯೊಂದು ಈಗಾಗಲೇ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.