ಪ್ರಜ್ವಲ್ ಜಾಮೀನು ತೀರ್ಪು ಕಾಯ್ದಿರಿಕೆ

highcourt
Published on

ಬೆಂಗಳೂರು: ಮನೆ ಕೆಲಸದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಆರೋಪ ಸಂಬಂಧ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್ ತೀರ್ಪು ಕಾಯ್ದಿರಿಸಿದೆ.

ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಅರ್ಜಿದಾರರು ಸಲ್ಲಿಸಿರುವ ಜಾಮೀನು ಅರ್ಜಿ ಮತ್ತು ನಿರೀಕ್ಷಣಾ ಜಾಮೀನು ಅರ್ಜಿಗಳ ತೀರ್ಪು ಒಟ್ಟಾಗಿ ಪ್ರಕಟಿಸುವುದಾಗಿ ತಿಳಿಸಿದೆ.

ಈ ವೇಳೆ ಅರ್ಜಿದಾರರ ಪರ ವಕೀಲರು, ಐದು ವರ್ಷಗಳ ಹಿಂದೆ ಘಟನೆ ಸಂಭವಿಸಿದೆ. ಅತ್ಯಾಚಾರ ನಡೆದಿದೆ ಎಂಬುದಾಗಿ ಆರೋಪಿಸಿದ್ದರೂ, ಅವರ ಮನೆಯಲ್ಲಿಯೇ ಕೆಲಸ ಮಾಡಿಕೊಂಡು ಉಳಿದುಕೊಂಡಿದ್ದರು ಎಂದು ಪೀಠಕ್ಕೆ ಮಾಹಿತಿ ನೀಡಿದರು.

ಸಂತ್ರಸ್ತೆಯ ಗೋಳು ದಾಖಲು

ವಿಚಾರಣೆ ವೇಳೆ ಹಿರಿಯ ವಕೀಲ ಪ್ರೋ.ರವಿವರ್ಮ ಕುಮಾರ್ ಪ್ರಕರಣ ಸಂಬಂಧ ವಿಧಿ ವಿಜ್ಞಾನ ಪ್ರಯೋಗಾಲಯ ನೀಡಿರುವ ವರದಿಯಲ್ಲಿ ಅರ್ಜಿದಾರರ ಧ್ವನಿ ಸಾಭೀತಾಗಿದೆ. ವರದಿ ಲಭ್ಯವಾದ ಅಂಶಗಳನ್ನು ಓದುವುದಕ್ಕೂ ಕಷ್ಟ ಸಾಧ್ಯ. ಸಂತ್ರಸ್ತೆಯ ನೋವು, ಗೋಳು ದಾಖಲಾಗಿದೆ. ಈ ಎಲ್ಲ ಅಂಶಗಳನ್ನು ಪರಿಶೀಲಿಸಿದ ಬಳಿಕವೂ ಒಪ್ಪಿತ ಲೈಂಗಿಕ ಕ್ರಿಯೆ ಎಂದರೆ ಹೇಗೆ? ಎಂದು ಪ್ರಶ್ನಿಸಿದರು. ಜತೆಗೆ, ಸಂತ್ರಸ್ತ ಮಹಿಳೆ ಅರ್ಜಿದಾರರ ವಯಸ್ಸಿಗಿಂತಲೂ ಎರಡು ಪಟ್ಟು ದೊಡ್ಡವರಾಗಿದ್ದಾರೆ’ ಅಷ್ಟಾದರೂ,ಮಹಿಳೆ ಪ್ರಜ್ವಲ್ ರೇವಣ್ಣರ ಕಾಲು ಹಿಡಿದುಕೊಂಡು ಬೇಡಿಕೊಂಡಿದ್ದಾಳೆ. ಆದರೂ, ಅರ್ಜಿದಾರರ ನಿಯಂತ್ರಣದಲ್ಲಿಯೇ ಉಳಿಯಬೇಕಾಗಿತ್ತು ಎಂದು ಅವರು ವಿವರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net