ತಪ್ಪು ಮಾಡಿಲ್ಲವೆಂದು ಕಣ್ಣೀರಿಟ್ಟ ಪ್ರಜ್ವಲ್!

Prajwal Revanna
Published on

ಬೆಂಗಳೂರು: ಕೆ.ಆರ್. ನಗರದ ಮನೆ ಕೆಲಸದಾಕೆ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಚಾರ್ಜಸ್ ಪ್ರಶ್ನಿಸಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ಜನಪ್ರತಿನಿಧಿಗಳ ನ್ಯಾಯಾಲಯ ವಜಾಗೊಳಿಸಿದೆ.

ಮನೆ ಕೆಲಸದಾಕೆ ಮೇಲಿನ ಲೈಂಗಿಕ ದೌರ್ಜನ್ಯ, ಲೈಂಗಿಕ ಹಿಂಸೆ, ಖಾಸಗಿ ವಿಡಿಯೋ ಚಿತ್ರೀಕರಣ ಸಂಬಂಧ ಸಿಐಡಿ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದರ ತನಿಖೆ ಕೈಗೊಂಡ ವಿಶೇಷ ತನಿಖಾ ತಂಡ(ಎಸ್‌ಐಟಿ) 1652 ಪುಟಗಳ ದೋಷಾರೋಪ ಪಟ್ಟಿಯನ್ನು ಸಿಸಿಎಚ್-42ನೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿತ್ತು. ಇದಾದ ಮೇಲೆ ಪ್ರಜ್ವಲ್ ವಿರುದ್ಧ ಚಾರ್ಜಸ್ ೈಲ್ ಮಾಡಿತ್ತು.

ಇದನ್ನು ಪ್ರಶ್ನಿಸಿ ಪ್ರಜ್ವಲ್ ಅರ್ಜಿ ಸಲ್ಲಿಸಿದ್ದರು. ಗುರುವಾರ ವಾದ-ಪ್ರತಿವಾದ ಆಲಿಸಿದ ನ್ಯಾ. ಸಂತೋಷ್ ಗಜಾನನ ಭಟ್, ಆರೋಪಗಳನ್ನು ಒಂದೊಂದಾಗಿ ಓದುತ್ತಿದ್ದಾಗ ಪ್ರಜ್ವಲ್ ‘ನಾನು ತಪ್ಪುಮಾಡಿಲ್ಲ ಮಹಾಸ್ವಾಮಿ’ ಎಂದು ಕಣ್ಣೀರಿಟ್ಟ ಪ್ರಸಂಗ ನಡೆಯಿತು. ಕೊನೆಗೆ ಪ್ರಜ್ವಲ್ ಅರ್ಜಿಯನ್ನು ವಜಾಗೊಳಿಸಿದ ನ್ಯಾಯಾಲಯ, ಪ್ರಕರಣದ ವಿಚಾರಣೆ ನಡೆಯಲಿ ಎಂದು ಆದೇಶ ಹೊರಡಿಸಿ ಏ.9ಕ್ಕೆ ಮುಂದೂಡಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net