ಪ್ರಜ್ವಲ್ ಕೇಸ್ ಸ್ವತಂತ್ರ ತನಿಖೆ ಅರ್ಜಿ ಇತ್ಯರ್ಥ

highcourt
Published on

ಬೆಂಗಳೂರು: ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಸ್ವತಂತ್ರ ಸಂಸ್ಥೆಯಿಂದ ತನಿಖೆ ನಡೆಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಸಲ್ಲಿಕೆಯಾದ ಅರ್ಜಿಯನ್ನು ಹೈಕೋರ್ಟ್ ಇತ್ಯರ್ಥಪಡಿಸಿದೆ.

ಕರ್ನಾಟಕ ರಾಷ್ಟ್ರಸಮಿತಿ ಪಕ್ಷದ ಉಪಾಧ್ಯಕ್ಷ ಎಸ್.ಎಚ್. ಲಿಂಗೇಗೌಡ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಸ್.ಆರ್. ಕೃಷ್ಣ ಮೂರ್ತಿ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು. ಅರ್ಜಿದಾರರ ಪರ ವಕೀಲ ಜಿ.ಆರ್ ಮೋಹನ್, ಘಟನೆಗೆ ಸಂಬಂಧಿಸಿದಂತೆ ಸಾಕ್ಷಾೃಧಾರಗಳನ್ನು ಪೊಲೀಸ್ ಠಾಣೆಗೆ ಸಲ್ಲಿಸಿದರೂ ಎಸ್‌ಐಟಿ ಸಮರ್ಪಕವಾಗಿ ತನಿಖೆ ನಡೆಸುವಲ್ಲಿ ಎಡವುತ್ತಿದೆ ಎಂದರು.

ವಾದ ಆಲಿಸಿದ ನ್ಯಾಯಪೀಠ, ಸರ್ಕಾರ ಇದಾಗಲೇ ಎಸ್‌ಐಟಿ ರಚನೆ ಮಾಡಿದೆ. ಪ್ರಕರಣ ಕುರಿತು ನಿಮ್ಮ ಅಸಮಾಧಾನ ಏನೇ ಇದ್ದರೂ ಆ ಬಗ್ಗೆ ಎಸ್‌ಐಟಿ ಗಮನಕ್ಕೆ ತಂದು ಪರಿಹರಿಸಿಕೊಳ್ಳಬಹುದಾಗಿದೆ. ನೀವು ಮೊದಲು ಎಸ್‌ಐಟಿಗೆ ಮನವಿ ಸಲ್ಲಿಸಿ ಎಂದು ಹೇಳಿ ಅರ್ಜಿ ಇತ್ಯರ್ಥಪಡಿಸಿ ಆದೇಶಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net