ಪ್ರಜ್ವಲ್ ರೇವಣ್ಣ ಪ್ರಕರಣ, ಎಸ್‌ಐಟಿ ಪಾರದರ್ಶಕ ತನಿಖೆ ಮಾಡುತ್ತಿಲ್ಲ: ನಿಖಿಲ್ ಕುಮಾರಸ್ವಾಮಿ

Prajwal Nikhil
Published on

ಬೆಂಗಳೂರು: ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಪಾರದರ್ಶಕ ತನಿಖೆ ಮಾಡುತ್ತಿಲ್ಲ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.

ದೇವೇಗೌಡರ ಕುಟುಂಬದ ಜತೆಗೆ ರೇವಣ್ಣ ಅವರನ್ನು ಟಾರ್ಗೆಟ್ ಮಾಡಿ ಜೈಲಿಗೆ ಕಳಿಸಲೇ ಬೇಕು ಎಂದು ಕಳಿಸಿದ್ದಾರೆ. ಇದೆಲ್ಲ ಬಹಳ ದಿನ ಇದೆಲ್ಲ ನಡೆಯುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

ಪಾರದರ್ಶಕ ತನಿಖೆಯಾಗುತ್ತಿಲ್ಲ

ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ರಚನೆ ಆದ ಮೇಲೆ ಪಾರದರ್ಶಕ ತನಿಖೆ ನಡೆಯುತ್ತಿಲ್ಲ ಎಂದು ಇದೇ ಸಂದರ್ಭದಲ್ಲಿ ನಿಖಿಲ್ ಕುಮಾರಸ್ವಾಮಿ ಆರೋಪಿಸಿದರು.

ಪ್ರಧಾನಿ ನರೇಂದ್ರ ಮೋದಿಗೆ ಸಿಎಂ ಸಿದ್ದರಾಮಯ್ಯ ಮತ್ತೆ ಪತ್ರ ಬರೆದ ವಿಚಾರ ಕುರಿತ ಪ್ರಶ್ನೆಗೆ, ಕುಮಾರಸ್ವಾಮಿ ಅವರು ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ವಿದೇಶದಿಂದ ಬಂದು ಎಸ್‌ಐಟಿ ತನಿಖೆ ಎದುರಿಸುವಂತೆ ಮನವಿ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ನಾವೆಲ್ಲ ಕಾಯುತ್ತಿದ್ದೇವೆ. ಒಬ್ಬ ಪ್ರಜೆಯಾಗಿ ಪ್ರಜ್ವಲ್ ಶೀಘ್ರವಾಗಿ ಬರಲಿ ಎನ್ನುವುದು ನಮ್ಮ ಆಶಯ ಎಂದರು.

ದೇವೇಗೌಡರ ಕುಟುಂಬವನ್ನು ಟಾರ್ಗೆಟ್ ಮಾಡಲಾಗುತ್ತಿದೆ. ಖಂಡಿತವಾಗಲೂ ನಾವು ಇದನ್ನು ಹೇಳುತ್ತಿಲ್ಲ. ಹಳ್ಳಿಯ ಜನ ಮಾತಾಡುತ್ತಿದ್ದಾರೆ. ದೇವೇಗೌಡರ ಕುಟುಂಬವನ್ನು ಇರಬಹುದು, ರೇವಣ್ಣ ಅವರನ್ನು ಟಾರ್ಗೆಟ್‌ಮಾಡಿ ಜೈಲಿಗೆ ಕಳಿಸಲೇ ಬೇಕು ಅಂತ ಕಳಿಸಿದ್ದಾರೆ ಎಂದು ಹರಿಹಾಯ್ದರು.

ಸರ್ಕಾರ ಅಧಿಕಾರದಲ್ಲಿದ್ದಾಗ ನ್ಯಾಯಯುತವಾಗಿ ನಡೆದುಕೊಳ್ಳುವುದನ್ನು ಕಲಿಯಬೇಕು ಎಂದು ನಿಖಿಲ್ ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಫೋನ್ ಟ್ಯಾಪಿಂಗ್ ಮಾಹಿತಿ ಇದೆ:

ಕಾಂಗ್ರೆಸ್ ಸರ್ಕಾರ ಫೋನ್ ಟ್ಯಾಪಿಂಗ್ ಮಾಡುತ್ತಿದೆ ಎಂಬ ಆರೋಪ ಕುರಿತು ಪ್ರತಿಕ್ರಿಯಿಸಿದ ಅವರು, ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಸಂಬಂಧಿಸಿದಂತೆ ೆನ್ ಟ್ಯಾಪಿಂಗ್ ಆಗುತ್ತಿರುವ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಕೆಲವು ಮೂಲಗಳಿಂದ ಮಾಹಿತಿ ದೊರಕಿದೆ ಎಂದು ನಿಖಿಲ್ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net