ಬೆಂಗಳೂರಿಗೆ ಬರಲು ಪ್ರಜ್ವಲ್‌ ರೇವಣ್ಣ ಪ್ಲೈಟ್​ ಟಿಕೆಟ್ ಬುಕ್; ವಶಕ್ಕೆ ಪಡೆಯಲು ಎಸ್‌ಐಟಿ ಸಜ್ಜು..

prajwal
Published on

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್​ ರೇವಣ್ಣ ಅವರದ್ದು ಎನ್ನಲಾಗಿರುವ ಅಶ್ಲೀಲ ವಿಡಿಯೋ ಪ್ರಕರಣದ ಆರೋಪ ಹೋತ್ತಿರುವ ಪ್ರಜ್ವಲ್​​ ಪ್ರಕರಣ ದಾಖಲಾಗುವ ಮುನ್ನ ವಿದೇಶ ಪ್ರವಾಸ ಹೋಗಿದ್ದರು. ಕಳೆದ ಒಂದು ತಿಂಗಳಿನಿಂದ ವಿದೇಶದಲ್ಲಿ ಪ್ರಜ್ವಲ್​​ ರೇವಣ್ಣ ಬೆಂಗಳೂರಿಗೆ ವಾಪಸ್​ ಆಗಲು ಪ್ಲೈಟ್​ ಟಿಕೆಟ್​​ ಬುಕ್​ ಮಾಡಿದ್ದಾರೆ.

ಬೆಂಗಳೂರಿಗೆ ಬ್ಯುಸಿನೆಸ್ ಕ್ಲಾಸ್ ಟಿಕೆಟ್ ಬುಕ್ ಮಾಡಿಕೊಂಡಿರುವ ಪ್ರಜ್ವಲ್‌ ರೇವಣ್ಣ, ಮೇ 30ರಂದು ಮಧ್ಯಾಹ್ನ ಜರ್ಮನಿಯಲ್ಲಿ ಫ್ಲೈಟ್‌ ಹತ್ತಲಿದ್ದಾರೆ. ಅವರು ಬೆಂಗಳೂರಿಗೆ ಆಗಮಿಸುತ್ತಲೇ ವಶಕ್ಕೆ ಪಡೆಯಲು ಎಸ್‌ಐಟಿ ಅಧಿಕಾರಿಗಳು ಕಾಯುತ್ತಿದ್ದಾರೆ.

ಲುಫ್ತಾನ್ಸಾ ಏರ್‌ಲೈನ್ಸ್‌ ಮೂಲಕ ಫ್ಲೈಟ್ ಟಿಕೆಟ್ ಬುಕ್ ಮಾಡಿರುವ ಪ್ರಜ್ವಲ್ ರೇವಣ್ಣ, ಗುರುವಾರ ಮಧ್ಯಾಹ್ನ 12.05ಕ್ಕೆ ಮ್ಯೂನಿಚ್‌ನಲ್ಲಿ ಫ್ಲೈಟ್ ಹತ್ತಲಿದ್ದಾರೆ. ಮಧ್ಯರಾತ್ರಿ 12.30ಕ್ಕೆ ಬೆಂಗಳೂರು ಏರ್‌ಪೋರ್ಟ್‌ಗೆ ಆಗಮಿಸಲಿದ್ದಾರೆ. ಪ್ರಜ್ವಲ್‌ ರೇವಣ್ಣ ಅವರು ಆಗಮಿಸುತ್ತಲೇ ವಶಕ್ಕೆ ಪಡೆಯಲು ಎಸ್‌ಐಟಿ ಸಜ್ಜಾಗಿದ ಎಂದು ಈಗಾಗಲೇ ಗೃಹ ಸಚಿವ ಪರಮೇಶ್ವರ್‌ ಹೇಳಿದ್ದಾರೆ.

ಮೇ 27ರಂದು ವಿಡಿಯೊದಲ್ಲಿ ಮಾತನಾಡಿದ್ದ ಪ್ರಜ್ವಲ್‌ ರೇವಣ್ಣ, ನಾನು ಶುಕ್ರವಾರ (ಮೇ 31) ಕರ್ನಾಟಕಕ್ಕೆ ಆಗಮಿಸಿ, ಎಸ್‌ಐಟಿ ತನಿಖೆಗೆ ಸಹಕಾರ ನೀಡುತ್ತೇನೆ. ನನಗೆ ಕಾನೂನಿನ ಮೇಲೆ ಅಪಾರ ಗೌರವವಿದೆ. ನನ್ನ ವಿರುದ್ಧ ರಾಹುಲ್‌ ಗಾಂಧಿ ಸೇರಿ ಕಾಂಗ್ರೆಸ್‌ ನಾಯಕರು ಮಾಡಿದ ಆರೋಪಗಳನ್ನು ಕೇಳಿ ನನಗೆ ಶಾಕ್‌ ಆಯಿತು. ಇದೇ ಕಾರಣಕ್ಕಾಗಿ ನಾನು ಕೆಲ ದಿನಗಳಿಂದ ಐಸೋಲೇಷನ್‌ನಲ್ಲಿ ಇದ್ದೆ ಎಂದಿದ್ದರು.

ವಿದೇಶ ಪ್ರವಾಸವು ಮೊದಲೇ ನಿಗದಿಯಾಗಿತ್ತು. ನಾನು ವಿದೇಶಕ್ಕೆ ಬಂದ ಬಳಿಕ ಪ್ರಕರಣ ತಿಳಿಯಿತು. ನನ್ನ ವಿರುದ್ಧ ರಾಹುಲ್‌ ಗಾಂಧಿ ಸೇರಿ ಎಲ್ಲರೂ ವೇದಿಕೆ ಮೇಲೆಯೇ ಹೇಳಿಕೆಗಳನ್ನು ಕೊಟ್ಟರು. ಆ ಮೂಲಕ ರಾಜಕೀಯ ಪಿತೂರಿ ನಡೆಸಿದರು. ಆದರೂ, ನಾನು ರಾಜ್ಯಕ್ಕೆ ಆಗಮಿಸಿ ತನಿಖೆಗೆ ಸಹಕಾರ ನೀಡುತ್ತೇನೆ. ನಾನು ಈ ಪ್ರಕರಣದಿಂದ ಆರೋಪಮುಕ್ತನಾಗಿ ಹೊರಬರುತ್ತೇನೆ ಎಂಬ ವಿಶ್ವಾಸವಿದೆ ಎಂಬುದಾಗಿ ಹೇಳಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net