ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಕೇಸ್​; ಮಾಜಿ ಸಂಸದನಿಗೆ ಜೀವಾವಧಿ ಶಿಕ್ಷೆ ಪ್ರಕಟಿಸಿದ ಕೋರ್ಟ್​

ವಿಜಯವಾಣಿ - 2025-08-02T145020.783
Published on

Prajwal Revanna: ಆ.01ರಂದು ಅಶ್ಲೀಲ ವಿಡಿಯೋ ಹಾಗೂ ಅತ್ಯಾಚಾರ ಪ್ರಕರಣದಲ್ಲಿ ಬಂಧಿತನಾಗಿದ್ದ ಮಾಜಿ ಸಂಸದ ಪ್ರಜ್ವಲ್ ರೇವಣ್ಣನನ್ನು ಅಪರಾಧಿ ಎಂದು ತೀರ್ಪು ನೀಡಿದ ಕೋರ್ಟ್​, ಇಂದಿನ ವಿಚಾರಣೆ ಬಳಿಕ ಶಿಕ್ಷೆ ಪ್ರಮಾಣವನ್ನು ಪ್ರಕಟಿಸಿದೆ.

ಪ್ರಜ್ವಲ್ ವಿರುದ್ಧ ದಾಖಲಾಗಿರುವ ನಾಲ್ಕು ಕೇಸ್​ಗಳ ಪೈಕಿ, ಮೈಸೂರಿನ ಕೆ.ಆರ್.​​ ನಗರದ ಮಹಿಳೆಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ದೋಷಿ ಎಂದು ಕೋರ್ಟ್ ಶುಕ್ರವಾರ ತೀರ್ಪು ಕೊಟ್ಟಿತು. ಪ್ರಕರಣದ ವಿಚಾರಣೆ ನಡೆಸಿದ್ದ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ನ ನ್ಯಾಯಧೀಶರು ಸಂತೋಷ್ ಗಜಾನನ ಭಟ್ ಅವರನ್ನೊಳಗೊಂಡ ಪೀಠವು, ಜುಲೈ 29ರಂದು ವಿಚಾರಣೆ ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಿತ್ತು. ಇಂದು ಶಿಕ್ಷೆ ಪ್ರಮಾಣ ಪ್ರಕಟಿಸಿದ್ದು, ಜೀವನಪರ್ಯಂತ ಜೀವಾವಧಿ ಶಿಕ್ಷೆಯನ್ನು ವಿಧಿಸಿದೆ.

ಜೀವನಪರ್ಯಂತ ಜೈಲುವಾಸ, 5 ಲಕ್ಷ ರೂ. ದಂಡ

ಅಪರಾಧಿ ಪ್ರಜ್ವಲ್ ರೇವಣ್ಣಗೆ ಜೀವನಪರ್ಯಂತ ಜೀವಾವಧಿ ಶಿಕ್ಷೆಯನ್ನು ವಿಧಿಸಿರುವ ನ್ಯಾಯಾಲಯ, ಇದರೊಟ್ಟಿಗೆ ಐದು ಲಕ್ಷ ರೂ. ದಂಡವನ್ನು ಕಟ್ಟುವಂತೆ ಸೂಚಿಸಿದೆ. ಮತ್ತು ಸಂತ್ರಸ್ತೆಗೆ 11 ಲಕ್ಷ ರೂ. ಪರಿಹಾರ ನೀಡುವಂತೆ ಆದೇಶಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net