ವಿಡಿಯೋ: ಪ್ರಣಬ್‌ ಮುಖರ್ಜಿ ಅಂತ್ಯ ಸಂಸ್ಕಾರಕ್ಕೆ ಸಕಲ ಸಿದ್ಧತೆ: ಚಿತಾಗಾರಕ್ಕೆ ಪಾರ್ಥೀವ ಶರೀರ

pranab1
Published on

ನವದೆಹಲಿ: ಮಾಜಿ ರಾಷ್ಟ್ರಪತಿ, ಭಾರತರತ್ನ ಪ್ರಣಬ್‌ ಮುಖರ್ಜಿ ಅವರ ಅಂತ್ಯಕ್ರಿಯೆ ಇಂದು ಮಧ್ಯಾಹ್ನ 2 ಗಂಟೆಗೆ ದೆಹಲಿಯ ಲೋಧಿ ರಸ್ತೆಯ ಕ್ರೆಮಟೋರಿಯಂನಲ್ಲಿ ನಡೆಯಲಿದೆ.

ಈ ಹಿನ್ನೆಲೆಯಲ್ಲಿ ಈಗಾಗಲೇ ಅವರ ಪಾರ್ಥೀವ ಶರೀರವನ್ನು ಚಿತಾಗಾರಕ್ಕೆ ಒಯ್ಯಲಾಗುತ್ತಿದೆ.

ಈ ನಡುವೆ ಕೇಂದ್ರ ಸಚಿವ ಸಂಪುಟವು ಇದೀಗ ಎರಡು ನಿಮಿಷ ಮೌನ ಆಚರಿಸಿ ಪ್ರಣಬ್‌ ಮುಖರ್ಜಿ ಅವರ ನಿಧನಕ್ಕೆ ಸಂತಾಪ ಸೂಚಿಸಿದೆ.

ಇವರ ಅಂತ್ಯಸಂಸ್ಕಾರಕ್ಕೆ ಸಿದ್ಧತೆಗಳು ನಡೆದಿದೆ. ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕ ದರ್ಶನಕ್ಕಾಗಿ 10, ರಾಜಾಜಿ ಮಾರ್ಗದಲ್ಲಿರುವ ಅವರ ನಿವಾಸದಲ್ಲಿ ಇರಿಸಲಾಗಿದೆ. ಇದಾಗಲೇ ಪ್ರಧಾನಿ ಮೋದಿ ಸೇರಿದಂತೆ ಹಲವಾರು ಗಣ್ಯರು ಅಂತಿಮ ನಮನ ಸಲ್ಲಿಸಿದ್ದಾರೆ. ರಾಹುಲ್‌ ಗಾಂಧಿ, ಮನಮೋಹನ ಸಿಂಗ್‌, ಅರವಿಂದ ಕೇಜ್ರಿವಾಲ್‌ ಅವರು ಇದೀಗ ಸ್ಥಳಕ್ಕೆ ಆಗಮಿಸಿ ಅಂತಿಮ ದರ್ಶನ ಪಡೆದರು.

ನವದೆಹಲಿಯ ಸೇನಾ ಆಸ್ಪತ್ರೆಗೆ ದಾಖಲಾಗಿದ್ದ ಪ್ರಣಬ್ ಮುಖರ್ಜಿ ಅವರು ಮೆದುಳು ಶಸ್ತ್ರಚಿಕಿತ್ಸೆ ನಂತರವೂ ಚೇತರಿಸಿಕೊಂಡಿರಲಿಲ್ಲ. ಆರೋಗ್ಯ ಸಮಸ್ಯೆಗಳು ಉಂಟಾಗಿದ್ದರಿಂದ ಕೋಮಾಗೆ ಜಾರಿದ್ದ ಅವರು ನಿನ್ನೆ ಸಂಜೆ ನಿಧನರಾಗಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net