ಸಾಣೇಹಳ್ಳಿ ಸ್ವಾಮೀಜಿ ವಿರುದ್ಧ ದೂರು ನೀಡಿದ ಪ್ರಶಾಂತ್ ಸಂಬರಗಿ

Prashanth Sambargi
Published on

ಬೆಂಗಳೂರು: ಗಣಪತಿ ದೇವರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಸಾಣೇಹಳ್ಳಿ ಸ್ವಾಮೀಜಿ ವಿರುದ್ದ ಹಿಂದೂ ಕಾರ್ಯಕರ್ತ ಪ್ರಶಾಂತ್ ಸಂಬರಗಿ ರಾಜರಾಜೇಶ್ವರಿನಗರ ಠಾಣೆಯಲ್ಲಿ ದೂರು ನೀಡಿದ್ದಾರೆ.
ಸಾಣೇಹಳ್ಳಿಯ ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಅವರು ನ.೨ರಂದು ಚಿತ್ರದುರ್ಗದ ಸಾಣೇಹಳ್ಳಿಯಲ್ಲಿ ನಡೆದ ರಾಷ್ಟ್ರೀಯ ನಾಟಕೋತ್ಸವ ಉದ್ಘಾಟನಾ ಸಮಾರಂಭದಲ್ಲಿ ಗಣಪತಿ ಸ್ತುತಿಸುವುದು ಮೌಢ್ಯದ ಆಚರಣೆ, ಗಣಪತಿ ಕಾಲ್ಪನಿಕ ದೇವರು, ಸ್ವಾತಂತ್ರೃ ಚಳವಳಿಯ ಸಂದರ್ಭದಲ್ಲಿ ನೆಪಮಾತ್ರಕ್ಕೆ ಹುಟ್ಟಿಕೊಂಡ ದೇವರು ಎಂದು ಹೇಳಿಕೆ ನೀಡಿದ್ದರು. ಇದು ಗಣಪತಿ ಭಕ್ತರು ಹಾಗೂ ಹಿಂದೂ ಸಮುದಾಯದವರ ಧಾರ್ಮಿಕ ಭಾವನೆಗೆ ಧಕ್ಕೆ ಉಂಟಾಗಿದೆ. ಹೀಗಾಗಿ ಅವರ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕು ಎಂದು ದೂರು ನೀಡಿದ್ದಾರೆ. ಎಫ್‌ಐಆರ್ ದಾಖಲಿಸಿಕೊಂಡಿಲ್ಲ. ಕಾನೂನು ತಜ್ಞರ ಸಲಹೆ ಪಡೆದು ಮುಂದಿನ ಪ್ರಕ್ರಿಯೆ ನಡೆಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net