

ಬೆಂಗಳೂರು: ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಮಾಜಿ ಸಿಎಂ ಸಿದ್ದರಾಮಯ್ಯ ಪರ ವರುಣಾ ಕ್ಷೇತ್ರದಲ್ಲಿ ಇಂದು ಭರ್ಜರಿ ಪ್ರಚಾರ ನಡಿಸಿದ್ದಾರೆ. ಇದೀಗ ಈ ಬಗ್ಗೆ ಸಂಸದ ಪ್ರತಾಪ್ ಸಿಂಹ್ ಸಾಮಾಜಿಕ ಜಾಲತಾಣದ ಮೂಲಕ ಟಾಂಗ್ ಕೊಟ್ಟಿದ್ದಾರೆ.
"ಪುನೀತ್ ರಾಜಕುಮಾರ್ ಸರ್ ಹೆಸರಿನಲ್ಲಿ ಬಡವರಿಗಾಗಿ ಆಸ್ಪತ್ರೆ ಕಟ್ಟಿದ ಸೋಮಣ್ಣ, ಮನಮೆಚ್ಚಿ ಶ್ಲಾಘಿಸಿದ ರಾಘಣ್ಣ, ಸಿದ್ರಾಮಣ್ಣ ಪರವಾಗಿ ಪ್ರಚಾರಕ್ಕಿಳಿದ ಶಿವಣ್ಣ! ಅವರವರ ಭಾವ ಭಕುತಿಗೆ..." ಎಂದು ಪ್ರತಾಪ್ ಸಿಂಹ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.
ನಟ ಪುನೀತ್ ರಾಜ್ಕುಮಾರ್ ಹೆಸರಿನಲ್ಲಿ ಸಚಿವ ಸೋಮಣ್ಣ ಆಸ್ಪತ್ರೆ ಕಟ್ಟಿದ್ದರು. ಈ ಆಸ್ಪತ್ರೆ ಉದ್ಘಾಟನೆಗೆ ಆಗಮಿಸಿದ್ದ ರಾಘವೇಂದ್ರ ರಾಜ್ಕುಮಾರ್, ಸೋಮಣ್ಣ ಅವರ ಕಾರ್ಯವನ್ನು ಮೆಚ್ಚಿ ಶ್ಲಾಘಿಸಿದ್ದರು. 2023ರ ಈ ಕಾಲದಲ್ಲಿ ಬಡವರಿಗಾಗಿ ಇಂತಹ ಉಚಿತ ಆಸ್ಪತ್ರೆ ಯಾರು ಕಟ್ಟುತ್ತಾರೆ? ಎಷ್ಟು ಪುಣ್ಯ ಮಾಡಿದ್ದೇವೆ ನಾವು ನೀವು, ಸೋಮಣ್ಣ ಅವರಿಗೆ ಸೆಲ್ಯೂಟ್ ಬಿಟ್ಟರೆ ಬೇರೆ ಏನೂ ಹೇಳಲು ಸಾಧ್ಯವಿಲ್ಲ ಎಂದು ರಾಘವೇಂದ್ರ ರಾಜ್ಕುಮಾರ್ ವೇದಿಕೆಯಲ್ಲಿ ಹೇಳಿದ್ದರು. ಇದೀಗ ಈ ವಿಡಿಯೋ ತುಣುಕನ್ನು ಮುಂದಿಟ್ಟುಕೊಂಡು ಶಿವರಾಜ್ ಕುಮಾರ್ ಅವರಿಗೆ ಪ್ರತಾಪ್ ಸಿಂಹ ಟಾಂಗ್ ಕೊಟ್ಟಿದ್ದಾರೆ.
ಇದನ್ನೂ ಓದಿ: ಮತದಾನ ಮಾಡಿದ ಅರ್ಧ ಗಂಟೆಯಲ್ಲಿ ಕೊನೆಯುಸಿರೆಳೆದ ಅಜ್ಜಿ!
ಪ್ರತಾಪ್ ಸಿಂಹ ಟ್ವೀಟ್ ವಿರುದ್ಧ ಶಿವರಾಜ್ ಕುಮಾರ್ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪುನೀತ್ ಅವರ ಹೆಸರಲ್ಲಿ ಆಸ್ಪತ್ರೆ ಕಟ್ಟಿಸಿರುವುದು ಶ್ಲಾಘನಿಯ. ದಯವಿಟ್ಟು ಅವರ ಹೆಸರನ್ನು ರಾಜಕೀಯದಲ್ಲಿ ಬಳಸಬೇಡಿ. ಇದು ಅವರ ವ್ಯಕ್ತಿತ್ವಕ್ಕೆ ಒಪ್ಪುದಿಲ್ಲ. ಶಿವಣ್ಣ, ಸುದೀಪ್ ಸರ್ ಇಬ್ಬರೂ ಬೇಕಾದವರ ಪರ ಪ್ರಚಾರ ಮಾಡುತ್ತಾ ಇದ್ದಾರೆ. ಅವರಿಗೆ ಸರಿ ಅನಿಸಿದ್ದನ್ನು ಮಾಡಲಿ ಎಂದು ಕೆಲ ಅಭಿಮಾನಿಯೊಬ್ಬರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆಸಮಸ