BJP ಕಾರ್ಯಕರ್ತರು ಮೈ ಮರೆತರೆ ಸಿದ್ದರಾಮಯ್ಯ ನೇತೃತ್ವದ ತಾಲಿಬಾನ್ ಸರ್ಕಾರ ಅಧಿಕಾರಕ್ಕೆ ಬರುತ್ತದೆ: ಪ್ರತಾಪ್ ಸಿಂಹ

prathap simha
Published on

ಮೈಸೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ನಾಯಕರು ವಿರೋಧ ಪಕ್ಷಗಳ ನ್ಯೂನತೆಗಳ ಕುರಿತಾಗಿ ಮಾತನಾಡುತ್ತಿದ್ದಾರೆ. ಮೈಸೂರಿನಲ್ಲಿ ನಡೆದ ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖರ ಸಭೆಯಲ್ಲಿ ಸಂಸದ ಪ್ರತಾಪ್ ಸಿಂಹ ಕಾಂಗ್ರೆಸ್​​ ಪಕ್ಷದ ವಿರುದ್ಧವಾಗಿ ಕಿಡಿಕಾರಿದ್ದಾರೆ.

ನಿನ್ನೆ ನಡೆದಿದ್ದ ಶಕ್ತಿ ಕೇಂದ್ರದ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿ ಕಾರ್ಯಕರ್ತರು ಮೈ ಮರೆತರೆ ಸಿದ್ದರಾಮಯ್ಯ ನೇತೃತ್ವದ ತಾಲಿಬಾನ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬರುತ್ತದೆ. ಆದ್ದರಿಂದ ಮತ್ತೊಮ್ಮೆ ಬಿಜೆಪಿ ನೇತೃತ್ವದ ರಾಷ್ಟ್ರೀಯವಾದಿ ಸರ್ಕಾರವನ್ನು ತರಲು ಪ್ರಯತ್ನ ಮಾಡಿ ಎಂದು ಮತದಾರರಿಗೆ ಹೇಳಿದ್ದಾರೆ.

ಈ ಹಿಂದೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ವೇಳೆ ಮದುವೆ, ಮುಂಜಿ, ಬೀಗರ ಊಟ ಅನೇಕ ಕಾರ್ಯಕ್ರಮಕ್ಕೆ ಮೈಸೂರಿಗೆ ಬರುತ್ತಿದ್ದರು. ಆದರೆ ದುಷ್ಕರ್ಮಿಗಳಿಂದ ಹತ್ಯೆಯಾದ ಕ್ಯಾತಮಾರನಹಳ್ಳಿಯ ರಾಜುವಿನ ಮನೆಗೆ ಸೌಜನ್ಯಕ್ಕೂ ಭೇಟಿ ನೀಡಲಿಲ್ಲ ಎಂದು ಸಿದ್ದರಾಮಯ್ಯ ವಿರುದ್ಧವಾಗಿ ಆಕ್ರೋಶ ಹೊರಹಾಕಿದ್ದಾರೆ.

ಪಿಎಫ್ಐ, ಕೆಎಫ್ ಡಿಯ 175 ಸದಸ್ಯರ ಮೇಲಿದ್ದ ಪ್ರಕರಣವನ್ನು ಸಿದ್ದರಾಮಯ್ಯ ವಾಪಸ್ ಪಡೆದರು. ಈ ಪರಿಣಾಮ ಎರಡು ಡಜನ್ ಹಿಂದೂ ಕಾರ್ಯಕರ್ತರ ಹತ್ಯೆ ನಡೆಯಿತು. ಈಗ ಮತ್ತೆ ರಾಜ್ಯದ ಮುಖ್ಯಮಂತ್ರಿಯಾಗಲು ಸಿದ್ದರಾಮಯ್ಯ ಹವಣಿಸುತ್ತಿದ್ದಾರೆ. ಒಂದು ವೇಳೆ ನಮ್ಮ ಕಾರ್ಯಕರ್ಯರು ಈ ವೇಳೆ ಮೈ ಮರೆತರೆ, ರಾಜ್ಯದಲ್ಲಿ ಮತ್ತೆ ತಾಲಿಬಾನ್ ಸರ್ಕಾರ ಅಧಿಕಾರಕ್ಕೆ ಬರುವ ಸಾಧ್ಯತೆ ಇದೆ ಎಂದಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net