16ಕ್ಕೆ ವೀರಶೈವ ಲಿಂಗಾಯತ ಸಮಾಜದಿಂದ ಪ್ರತಿಭಾ ಪುರಸ್ಕಾರ

Veerashaiva Lingayat samaja
Published on

ಶಿವಮೊಗ್ಗ: ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಶ್ರೀ ಬಸವೇಶ್ವರ ವೀರಶೈವ ಲಿಂಗಾಯತ ಸಮಾಜ ಸೇವಾ ಸಂಘದಿಂದ ಪ್ರತಿಭಾ ಪುರಸ್ಕಾರವನ್ನು ೆ.16ರ ಸಂಜೆ 6ಕ್ಕೆ ಬೆಕ್ಕಿನಕಲ್ಮಠದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ಎಸ್.ಎಸ್.ಜ್ಯೋತಿಪ್ರಕಾಶ್ ಹೇಳಿದರು.

ಧಾರ್ಮಿಕ, ರಾಜಕೀಯ ಹಾಗೂ ಶೈಕ್ಷಣಿಕವಾಗಿ ಸಮಾಜ ಕೆಲಸ ಮಾಡುತ್ತಿದೆ. ಕಳೆದ 10 ವರ್ಷಗಳಿಂದ ಸಮಾಜದಿಂದ ಪ್ರತಿಭಾ ಪುರಸ್ಕಾರ ನೀಡಲಾಗುತ್ತಿದೆ. ಶೇ.95ಕ್ಕೂ ಹೆಚ್ಚು ಅಂಕ ಪಡೆದವರಿಗೆ ತಲಾ 10 ಸಾವಿರ ರೂ., ಶೇ.90ರಿಂದ 95ರಷ್ಟು ಅಂಕ ಪಡೆದವರಿಗೆ ತಲಾ 6 ಸಾವಿರ ರೂ. ಮತ್ತು ಶೇ.60ಕ್ಕಿಂತ ಹೆಚ್ಚು ಅಂಕ ಪಡೆದವರಿಗೆ ತಲಾ 5 ಸಾವಿರ ರೂ. ಪುರಸ್ಕಾರ ನೀಡಲಾಗುವುದು ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಉನ್ನತ ಶಿಕ್ಷಣ ಪಡೆದವರಿಗೆ ಶೈಕ್ಷಣಿಕ ನೆರವು ನೀಡಲಾಗುತ್ತಿದೆ. ಈ ಬಾರಿ ಎಸ್‌ಎಸ್‌ಎಲ್‌ಸಿಯಲ್ಲಿ 65 ಹಾಗೂ ಪಿಯುಸಿಯಲ್ಲಿ 75 ವಿದ್ಯಾರ್ಥಿಗಳು ಸ್ಕಾಲರ್‌ಶಿಪ್ ಪಡೆಯಲು ಅರ್ಹರಾಗಿದ್ದಾರೆ. ಎಂಎ ಸ್ನಾತಕೋತ್ತರ ಪದವಿಯ 10 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗಿದೆ ಎಂದರು.

ಬೆಕ್ಕಿನಕಲ್ಮಠದ ಶ್ರೀ ಡಾ. ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ ಮತ್ತು ಬಸವಕೇಂದ್ರದ ಶ್ರೀ ಡಾ. ಬಸವ ಮರುಳಸಿದ್ಧ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಮಂಗಳೂರಿನ ಆರ್.ಜೆ.ಮ್ಯೂಸಿಕ್ ಮ್ಯಾನೇಜರ್ ಆರ್.ಜೆ.ನಯನಾ ಶೆಟ್ಟಿ ಅವರು ಇಂದಿನ ಮಕ್ಕಳ ವಿದ್ಯಾಭ್ಯಾಸ ಹಾಗೂ ಜೀವನ ಶೈಲಿ ಬಗ್ಗೆ ಉಪನ್ಯಾಸ ನೀಡುವರು ಎಂದು ಹೇಳಿದರು.

ಸಂಘದ ಉಪಾಧ್ಯಕ್ಷೆ ಶಾಂತಾ ಆನಂದ್, ಕೋಶಾಧ್ಯಕ್ಷ ಕೆ.ಎಸ್.ತಾರಾನಾಥ, ಗೌರವ ಕಾರ್ಯದರ್ಶಿ ಎಸ್.ಪಿ.ದಿನೇಶ್, ನಿರ್ದೇಶಕರಾದ ಅನಿತಾ ರವಿಶಂಕರ್, ಮೋಹನ ಕುಮಾರ್, ಪಿ.ರುದ್ರೇಶ್, ಎಸ್.ಎನ್.ಮಹಾಲಿಂಗಯ್ಯ ಶಾಸಿ, ಡಾ. ಸಿ.ರೇಣುಕಾರಾಧ್ಯ, ಟಿ.ಬಿ.ಜಗದೀಶ್, ಸಿ.ಮಹೇಶಮೂರ್ತಿ ಸುದ್ದಿಗೋಷ್ಠಿಯಲ್ಲಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net