

ಮಂಗಳೂರು: ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯುವಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕಾಣಿಯೂರು ನಿವಾಸಿ ಸದ್ದಾಂ ಎಂದು ಹೇಳಲಾಗುತ್ತಿದೆ. ಇನ್ನೂ ಹಲವು ಮಂದಿಯ ವಿಚಾರಣೆ ನಡೆಸಲಾಗುತ್ತಿದೆ.
ಪ್ರವೀಣ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಗುರುವಾರ ಇಬ್ಬರನ್ನು ವಶಕ್ಕೆ ಪಡೆದಿದ್ದರು. ಬೆಳ್ಳಾರೆಯ ಶಫೀಕ್ (27) ಮತ್ತು ಸವಣೂರಿನ ಝಾಕೀರ್ (29) ಬಂಧಿತರು. ಈ ಆರೋಪಿಗಳಿಗೆ ನ್ಯಾಯಾಂಗ ಕಸ್ಟಡಿ ವಿಧಿಸಲಾಗಿದೆ.
ಪ್ರವೀಣ್ ಅವರ ನೈಜ ಹಂತಕರು ಕೇರಳಕ್ಕೆ ಪರಾರಿಯಾಗಿದ್ದಾರೆ ಎನ್ನಲಾಗುತ್ತಿದ್ದು, ಶೋಧ ಮುಂದುವರಿದಿದೆ. ಹತ್ಯೆಗೆ ಸಂಬಂಧಿಸಿ 27 ಮಂದಿಯನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಹಂತಕರು ಕೇರಳದವರು ಎಂಬ ಅನುಮಾನ ಇದ್ದು ಅವರಿಗೆ ಮಾಹಿತಿದಾರ ರಾಗಿ ಸ್ಥಳೀಯರು ಸಹಕರಿಸಿದ್ದರೇ ಅಥವಾ ಕೃತ್ಯದಲ್ಲಿ ಸ್ಥಳೀಯರು ನೇರವಾಗಿ ಭಾಗಿಯಾಗಿದ್ದಾರೆಯೇ ಎಂಬುದು ತನಿಖೆಯಿಂದ ತಿಳಿಯಬೇಕಿದೆ.