ರೋಗ ನಿಯಂತ್ರಣಕ್ಕೆ ಎಚ್ಚರಿಕೆ ಕ್ರಮ

Ashwat babu dho
ಡಿಎಚ್‌ಒ ಡಾ. ಅಶ್ವತ್ಥ್‌ಬಾಬು,
Published on

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಜೂನ್ ಮತ್ತು ಜುಲೈನಲ್ಲಿ ಡೆಂಘೆ ಪ್ರಕರಣಗಳು ಹೆಚ್ಚಳವಾಗಿವೆ. ಆದರೆ ಯಾವುದೇ ಸಾವು-ನೋವು ಸಂಭವಿಸಿಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಅಶ್ವತ್ಥ್‌ಬಾಬು ಹೇಳಿದರು.
ಡೆಂಘೆ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಎಲ್ಲ ಎಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಐಸಿ, ಲಾರ್ವಾ ಸರ್ವೇ ಮುಂತಾದವುಗಳನ್ನು ಇಲಾಖೆ ಸಿಬ್ಬಂದಿ ಪ್ರತಿದಿನ ನಿರ್ವಹಿಸುತ್ತಿದ್ದಾರೆ ಎಂದು ಬುಧವಾರ ಸುದ್ದಿಗಾರರಿಗೆ ತಿಳಿಸಿದರು.
ಮಲೆನಾಡು ಭಾಗದಲ್ಲಿ ಅತಿ ಹೆಚ್ಚು ಮಳೆಯಾಗುತ್ತಿದ್ದು ಚಿಕ್ಕಮಗಳೂರು ನಗರ ಸೇರಿದಂತೆ ಬಯಲು ಪ್ರದೇಶದಲ್ಲಿ ಮಳೆ ಕಡಿಮೆಯಿದೆ. ಸ್ವಚ್ಛತೆ ಕಾಪಾಡುವುದು ಅವಶ್ಯಕ. ಡೆಂೆ ತಡೆಗೆ ಕ್ರಮ ವಹಿಸುವಂತೆ ನಾಗರಿಕರಲ್ಲಿ ಅರಿವು ಮೂಡಿಸಲಾಗುತ್ತಿದೆ ಎಂದು ಹೇಳಿದರು.
ಡೆಂೆ ಪ್ರಕರಣಗಳು ಮುಂದಿನ ದಿನಗಳಲ್ಲಿ ಇಳಿಮುಖವಾಗಲಿದೆ. ಶೀತ, ಜ್ವರದ ಪ್ರಕರಣಗಳು ಸರ್ಕಾರಿ ಆಸ್ಪತ್ರೆ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ವರದಿಯಾಗಿವೆ ಎಂದು ತಿಳಿಸಿದರು.
ಡೆಂೆ ಪ್ರಕರಣಕ್ಕೆ ಪ್ರತ್ಯೇಕ ವಾರ್ಡ್ ನಿರ್ಮಾಣ ಮಾಡಲಾಗಿದೆ. ಜಿಲ್ಲಾಸ್ಪತ್ರೆ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಬೆಡ್‌ಗಳ ಕೊರತೆಯಿಲ್ಲ. ಅಗತ್ಯ ಔಷಧಗಳ ದಾಸ್ತಾನಿದೆ ಎಂದು ಮಾಹಿತಿ ನೀಡಿದರು.
ನಗರಸಭೆಯಿಂದ 35 ವಾರ್ಡ್‌ಗಳಲ್ಲಿಯೂ ಚರಂಡಿ ಸ್ವಚ್ಛತೆ, ಫಾಗಿಂಗ್, ಬ್ಲೀಚಿಂಗ್ ಪೌಡರ್ ಸಿಂಪಡಣೆ ಸೇರಿದಂತೆ ಅಗತ್ಯ ಕ್ರಮ ಕೈಗೊಂಡಿದ್ದಾರೆ. ಕಸದಗಾಡಿಯಲ್ಲಿ ಡೆಂೆ ನಿಯಂತ್ರಣ ಕುರಿತು ಅಗತ್ಯ ಮಾಹಿತಿ ಪ್ರಸಾರ ಮಾಡುತ್ತಿದ್ದೇವೆ. ಈ ನಿಟ್ಟಿನಲಿ ್ಲಆರೋಗ್ಯಇಲಾಖೆಯೊಂದಿಗೆ ನಾಗರಿಕರು ಕೈಜೋಡಿಸುವಂತೆ ಮನವಿ ಮಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net