ಪ್ರೇಮ ವೈಲ್ಯ, ರೈಲಿಗೆ ಸಿಲುಕಿ ಯುವತಿ ಆತ್ಮಹತ್ಯೆ

crime
Published on

ಬೆಂಗಳೂರು: ಪ್ರೇಮ ವೈಫಲ್ಯಕ್ಕೆ ಮನನೊಂದು ಯುವತಿ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಲದೇವನಹಳ್ಳಿ ರೈಲ್ವೆ ನಿಲ್ದಾಣದ ಬಳಿ ನಡೆದಿದೆ.
ಪಶ್ಚಿಮ ಬಂಗಾಲದ ಡಾರ್ಜಿಲಿಂಗ್ ಮೂಲದ ಲಿಖಿತ ಗಾಜ್ಮೀರ್ (೨೫) ಮೃತ ದುರ್ದೈವಿ. ೧೦ ದಿನಗಳ ಹಿಂದೆ ತನ್ನ ಅಕ್ಕ ಮನೆಗೆ ಬಂದಿದ್ದ ಯುವತಿ ಮಂಗಳವಾರ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಬಿಎ ಓದಿರುವ ಲಿಖಿತ ಡಾಜೀಲಿಂಗ್‌ನಲ್ಲಿಯೇ ಬಿಹಾರಿ ಮೂಲದ ಯುವಕನನ್ನು ಎರಡು ವರ್ಷಗಳಿಂದ ಪ್ರೀತಿಸುತ್ತಿದ್ದಳು. ಇಬ್ಬರ ಪ್ರೇಮ ಚೆನ್ನಾಗಿಯೇ ಇತ್ತು. ಆದರೆ ಇತ್ತೀಚೆಗೆ ಕ್ಷುಲ್ಲಕ ಕಾರಣಗಳಿಗಾಗಿ ಲವ್ ಬ್ರೇಕ್ ಅಪ್ ಆಗಿತ್ತು ಎನ್ನಲಾಗಿದೆ. ಇದರಿಂದ ಲಿಖಿತ ಮನನೊಂದಿದ್ದಳು. ಸಾಯುವ ಮಾತಗಳನ್ನಾಡುತ್ತಿದ್ದಳು. ತಂಗಿ ಒಬ್ಬಳೇ ಇದ್ದರೆ ಏನಾದರೂ ಮಾಡಿಕೊಳ್ಳುತ್ತಾಳೆಂದು ಭಯಪಟ್ಟು ಲಿಖಿತ ಅಕ್ಕ ತಂಗಿಯ ನೋವು ಮರೆಸುವ ಸಲುವಾಗಿ ಬೆಂಗಳೂರಿನ ಸೋಲದೇವನಹಳ್ಳಿಯಲ್ಲಿದ್ದ ತನ್ನ ಮನೆಗೆ ಕರೆದುಕೊಂಡು ಬಂದು ಇರಿಸಿಕೊಂಡಿದ್ದರು. ಆದರೆ ಬೆಳಿಗ್ಗೆ ೯ ಗಂಟೆ ಸುಮಾರಿಗೆ ಇದ್ದಕ್ಕಿದ್ದಂತೆ ಮನೆಯಿಂದ ಹೊರಗಡೆ ಬಂದ ಲಿಖಿತ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ರೈಲ್ವೆ ಪೊಲೀಸರು ಸ್ಥಳ ಮಹಜರು ಕಾರ್ಯ ನಡೆಸಿದ್ದು, ಯಶವಂತಪುರ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net