ಮತಗಟ್ಟೆಗಳ ಸ್ಥಾಪನೆಗೆ ಸಿದ್ಧತೆ; ಸಾರ್ವತ್ರಿಕ ಚುನಾವಣೆ ಪ್ರಯುಕ್ತ ಅಧಿಕಾರಿಗಳ ಜತೆ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಸಭೆ

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023ರ ಸಂಬಂಧವಾಗಿ ವಿವಿಧ ನೋಡಲ್ ಅಧಿಕಾರಗಳ ಸಮನ್ವಯ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಅಧಿಕಾರಿಗಳೊಂದಿಗೆ ಚರ್ಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023ರ ಸಂಬಂಧವಾಗಿ ವಿವಿಧ ನೋಡಲ್ ಅಧಿಕಾರಗಳ ಸಮನ್ವಯ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಅಧಿಕಾರಿಗಳೊಂದಿಗೆ ಚರ್ಚಿಸಿದರು.
Published on

ತುಮಕೂರು: ಜಿಲ್ಲೆಯ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ತಲಾ ಐದು ಮಹಿಳಾ ಮತಗಟ್ಟೆ, ಎರಡು ಯುವ ಮತದಾರರ ಮತಗಟ್ಟೆ ಮತ್ತು ಅಂಗವಿಕಲರಿಗಾಗಿ ಒಂದು ಮತಗಟ್ಟೆ ಸ್ಥಾಪಿಸಲು ಸಿದ್ಧತೆ ನಡೆಸಿದೆ.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023ರ ಸಂಬಂಧವಾಗಿ ವಿವಿಧ ನೋಡಲ್ ಅಧಿಕಾರಗಳ ಸಮನ್ವಯ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮಹಿಳಾ ಮತಗಟ್ಟೆಗಳಲ್ಲಿ ಕಡ್ಡಾಯವಾಗಿ ಎಲ್ಲ ಮಹಿಳಾ ಸಿಬ್ಬಂದಿ, ಯುವ ಮತದಾರರ ಮತಗಟ್ಟೆಗಳಲ್ಲಿ ಕಡ್ಡಾಯವಾಗಿ ಯುವ ಸಿಬ್ಬಂದಿಯನ್ನು ನೇಮಿಸುವಂತೆ

ನೋಡಲ್ ಅಧಿಕಾರಿ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಕೃಷ್ಣಪ್ಪಗೆ ಸೂಚಿಸಿದರು.

ಜಿಲ್ಲೆಯ 11 ವಿಧಾನಸಭಾ ಕ್ಷೇತ್ರಗಳಲ್ಲಿ 55 ಮಹಿಳಾ ಮತಗಟ್ಟೆಗಳು, 22 ಯುವ ಮತದಾರರ ಮತಗಟ್ಟೆಗಳು ಮತ್ತು ಅಂಗವಿಕಲರಿಗಾಗಿ 11 ಮತಗಟ್ಟೆ ಇರುವಂತೆ ನೋಡಿಕೊಳ್ಳಬೇಕು ಎಂದರು. ಪಿಆರ್‌ಒ, ಎಪಿಆರ್‌ಒ ಗಳ ತರಬೇತಿಗೆ ಅವಶ್ಯಕ ತರಬೇತುದಾರರನ್ನು ಗುರುತಿಸುವಂತೆ ಹಾಗೂ ವಿಧಾನಸಭಾ ಕ್ಷೇತ್ರವಾರು ಅವಶ್ಯಕ ತರಬೇತಿ ನೀಡುವಂತೆ ನೋಡಲ್ ಅಧಿಕಾರಿ ಮಂಜುನಾಥ್‌ಗೆ ಸೂಚಿಸಿದರು.

ಚುನಾವಣೆಗೆ ಸಂಬಂ ಧಿಸಿದಂತೆ ಚುನಾವಣಾ ಆಯೋಗ ಮತ್ತು ಜಿಲ್ಲಾ ಚುನಾವಣಾಧಿಕಾರಿ ಪೂರೈಸುವ ಚುನಾವಣಾ ಸಾಮಗ್ರಿಗಳ ಪಟ್ಟಿ ತಯಾರಿಸುವಂತೆ ಹಾಗೂ ಚುನಾವಣಾ ಸಾಮಾಗ್ರಿಗಳನ್ನು ಪಡೆಯಲು ಹಾಗೂ ವಿಧಾನಸಭಾ ಕ್ಷೇತ್ರವಾರು ವಿಂಗಡಿಸಲು ತಂಡಗಳ ರಚನೆ ಮಾಡುವಂತೆ ನೋಡಲ್ ಅಧಿಕಾರಿ ಮಂಟೇಸ್ವಾಮಿಗೆ ಸೂಚಿಸಿದರು.

ಚುನಾವಣಾ ದಿನ ಅವಶ್ಯವಿರುವ ವಾಹನಗಳ ಪಟ್ಟಿ ಸಿದ್ಧಪಡಿಸಿ, ವಾಹನಗಳನ್ನು ವಿಧಾನಸಭಾವಾರು ಹಂಚಿಕೆ ಮಾಡಲು ಕ್ರಮ ಕೈಗೊಳ್ಳುವಂತೆ ನೋಡಲ್ ಅಧಿಕಾರಿ ಹಾಗೂ ಸಾರಿಗೆ ಅಧಿಕಾರಿ ರಾಜು ಅವರಿಗೆ ಸೂಚಿಸಿದರು.

ಚುನಾವಣಾ ಆಯೋಗದ ತಂತ್ರಾಂಶಗಳಾದ ಸುವಿಧಾ, ಸಮಾಧಾನ, ಎನ್ ಕೋರ್(ಮತ ಎಣಿಕೆ) ಬಗ್ಗೆ ಸಿಬ್ಬಂದಿಯನ್ನು ತರಬೇತಿಗೊಳಿಸುವುದು ಮತ್ತು ಸ್ವೀಪ್‌ಗೆ ಸಂಬಂಧಿಸಿದ ಮಾಹಿತಿಯನ್ನು ಪ್ರತಿದಿನ ಆಪ್‌ಡೇಟ್ ಮಾಡುವುದು, ಡಿಇಒ ವೆಬ್‌ಸೈಟ್, ಟ್ವಿಟರ್ ಖಾತೆ ಆಪ್‌ಡೇಟ್ ಮಾಡುವಂತೆ ಸೂಚಿಸಿದರು.

ಮತದಾರರಿಗೆ ಚುನಾವಣೆಯ ದಿನ ಸಹಾಯವಾಣಿ ತೆರೆಯಲು ಅವಶ್ಯಕ ಕ್ರಮಕೈಗೊಳ್ಳುವುದು, ಚುನಾವಣೆ ವೀಕ್ಷಕರ ಶಿಷ್ಟಾಚಾರಕ್ಕಾಗಿ ಅಗತ್ಯ ಸಿಬ್ಬಂದಿ ನೇಮಿಸುವುದು, ಅಂಗವಿಕಲ ಮತದಾರರ ಅನುಕೂಲಕ್ಕಾಗಿ ವೀಲ್‌ಚೇರ್ ಭೂತ ಕನ್ನಡಿ ಇತ್ಯಾದಿಗಳನ್ನು ಸ್ಥಾಪಿಸುವಂತೆ ಅಧಿಕಾರಿಗಳಿಗೆ ನಿರ್ದೇಶಿಸಿದರು. ಚುನಾವಣಾ

ಕಾರ್ಯಗಳಿಗೆ ನಿಯೋಜನೆಗೊಂಡಿರುವ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಇದ್ದರು

.ಕರಪತ್ರ, ಪೋಸ್ಟರ್‌ನಲ್ಲಿ ಮುದ್ರಕರ ಹೆಸರು: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕರಪತ್ರ, ಪೋಸ್ಟರ್ ಇತ್ಯಾದಿಗಳನ್ನು ಮುದ್ರಿಸುವಾಗ ಕಡ್ಡಾಯವಾಗಿ ಪ್ರಕಾಶಕರ

ಹೆಸರು, ವಿಳಾಸ ಮುದ್ರಿಸಬೇಕು ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಸೂಚಿಸಿದ್ದಾರೆ.

ಜಿಲ್ಲೆಯ ಪ್ರಿಂಟರ್ಸ್‌ ಮತ್ತು ಕೇಬಲ್ ಅಪರೇಟರ್‌ಗಳ ಸಭೆ ನಡೆಸಿದ ಅವರು,1951 ಸೆಕ್ಷನ್ 127ಎ ಪ್ರಜಾಪ್ರತಿನಿಧಿ ಕಾಯ್ದೆ ಅನ್ವಯ ಚುನಾವಣಾ ನೀತಿ ಸಂಹಿತೆ ಜಾರಿಯಾದ ತಕ್ಷಣವೇ ಕ್ರಮ ವಹಿಸತಕ್ಕದು ಎಂದು ತಿಳಿಸಿದರು.

ಜಿಲ್ಲೆಯಲ್ಲಿರುವ ಕೇಬಲ್ ಅಪರೇಟರ್‌ಗಳು ಕಡ್ಡಾಯವಾಗಿ ಜಿಲ್ಲಾ ಹಾಗೂ ತಾಲೂಕು ಮಟ್ಟದ ಎಂ.ಸಿ.ಎಂ.ಸಿ ಸಮಿತಿಗೆ ತಮ್ಮ ಕೇಬಲ್ ಪ್ರಸಾರಕ್ಕೆ ಸಂಬಂಧಿಸಿದಂತೆ ಮಾಹಿತಿ ನೀಡಬೇಕು, ತಮ್ಮ ಕೇಬಲ್‌ಗಳ ಮೂಲಕ ಯಾವುದೇ ಅಭ್ಯರ್ಥಿಯ ಚುನಾವಣಾ ಸಂಬಂಧಿತ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಎಂಸಿಎಂಸಿ ಸಮಿತಿಯಿಂದ ಪೂರ್ವ ಅನುಮತಿ ಪಡೆಯಬೇಕಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net