ಮಲೆನಾಡ ಕಂಬಳಕ್ಕೆ ಸಿದ್ಧತೆ ಆರಂಭ

kambala
ಮಲೆನಾಡ ತುಂಗಭದ್ರಾ ಜೋಡುಕರೆ ಕಂಬಳ ಲೋಗೊವನ್ನು ಕೆ.ಎಸ್.ಈಶ್ವರಪ್ಪ ಅನಾವರಣಗೊಳಿಸಿದರು. ಕೆ.ಇ.ಕಾಂತೇಶ್, ಇ.ವಿಶ್ವಾಸ್, ಲೋಕೇಶ್ ಶೆಟ್ಟಿ, ಶಂಕರ್ ಗನ್ನಿ ಮುಂತಾದವರಿದ್ದರು.
Published on

ಶಿವಮೊಗ್ಗ: ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದಲ್ಲಿ ಏ.19 ಹಾಗೂ 20ರಂದು ನಡೆಯಲಿರುವ ತುಳುನಾಡ ಜಾನಪದ ಕ್ರೀಡೆ ಕಂಬಳಕ್ಕೆ ಸಿದ್ಧತೆಗಳು ನಿಧಾನವಾಗಿ ಆರಂಭವಾಗುತ್ತಿವೆ. ಮಲೆನಾಡ ತುಂಗಭದ್ರಾ ಜೋಡುಕರೆ ಕಂಬಳದ ಸ್ಪರ್ಧೆಗೆ ಅಂಕಣಗಳನ್ನು ಸಿದ್ಧಪಡಿಸಲು ಮಾಜಿ ಡಿಸಿಎಂ ಹಾಗೂ ಕಂಬಳ ಸಮಿತಿ ಗೌರವಾಧ್ಯಕ್ಷ ಕೆ.ಎಸ್.ಈಶ್ವರಪ್ಪ ಭೂಮಿ ಪೂಜೆ ನೆರವೇರಿಸಿದರು.

ಇದೇ ಸಂದರ್ಭದಲ್ಲಿ ಕಂಬಳದ ಚಿಹ್ನೆ, ಜಾಲತಾಣ ಮತ್ತು ಸಾಮಾಜಿಕ ಮಾಧ್ಯಮಗಳನ್ನು ಅಧಿಕೃತವಾಗಿ ಬಿಡುಗಡೆ ಮಾಡಲಾಯಿತು. ಅಧ್ಯಕ್ಷ ಮುಚ್ಚೂರು ಕಲ್ಕುಂಡೆ ಲೋಕೇಶ್ ಶೆಟ್ಟಿ, ಕಾರ್ಯಾಧ್ಯಕ್ಷ ಕೆ.ಇ.ಕಾಂತೇಶ್, ಪಾಲಿಕೆ ಮಾಜಿ ಉಪಮೇಯರ್ ಶಂಕರ್ ಗನ್ನಿ, ಮಾಜಿ ಸದಸ್ಯ ಇ.ವಿಶ್ವಾಸ್ ಮತ್ತಿತರರಿದ್ದರು.

ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಒಳಗೊಂಡ ಸಮಿತಿ ರಚಿಸಲಾಗಿದೆ. ಸ್ಪರ್ಧೆಯಲ್ಲಿ ಕರಾವಳಿ ಭಾಗದ 100ಕ್ಕೂ ಹೆಚ್ಚು ಕೋಣಗಳು ಭಾಗವಹಿಸಲಿವೆ. ಸುಮಾರು 7ರಿಂದ 8 ಲಕ್ಷ ಜನ ಸ್ಪರ್ಧೆ ನೋಡಲು ಆಗಮಿಸುವ ನಿರೀಕ್ಷೆ ಇದೆ. ಸತತ 36 ತಾಸು ಸ್ಪರ್ಧೆ ನಡೆಯಲಿದೆ. ಅದಕ್ಕೆ ತಕ್ಕ ವ್ಯವಸ್ಥೆಗಳನ್ನು ಮಾಡಿಕೊಳ್ಳಲು ಸಮಿತಿ ನಿರ್ಧರಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net