ವಕ್ಫ್ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತ | Waqf Bill

9-67f17b3f4dfc0
Published on

Waqf Bill : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಒಪ್ಪಿಗೆ ದೊರೆತಿದ್ದು(ಅಂಕಿತ), ವಕ್ಫ್ (ತಿದ್ದುಪಡಿ) ಮಸೂದೆ 2025 ಶನಿವಾರ ಅಧಿಕೃತವಾಗಿ ಕಾನೂನಾಗಿ ಜಾರಿಗೆ ಬಂದಿದೆ.

ನವದೆಹಲಿ: ಭಾರೀ ಚರ್ಚೆಗಳ ನಂತರ ಸಂಸತ್ತಿನ ಎರಡೂ ಸದನಗಳು ಅಂಗೀಕರಿಸಿದ ವಕ್ಫ್ (ತಿದ್ದುಪಡಿ) ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಶನಿವಾರ ತಮ್ಮ ಒಪ್ಪಿಗೆ ನೀಡಿದ್ದಾರೆ. ಈ ಮೂಲಕ ಇಂದಿನಿಂದ(ಏ.05) ಅಧಿಕೃತವಾಗಿ ಕಾನೂನಾಗಿ ಜಾರಿಗೆ ಬಂದಿದೆ.

ರಾಜ್ಯಸಭೆಯಲ್ಲಿ, ಮಸೂದೆಯನ್ನು 128 ಸದಸ್ಯರು ಪರವಾಗಿ ಮತ್ತು 95 ಸದಸ್ಯರು ವಿರೋಧಿಸಿ ಮತ ಚಲಾಯಿಸುವ ಮೂಲಕ ಅಂಗೀಕರಿಸಲಾಯಿತು. ಗುರುವಾರ ಮುಂಜಾನೆ ಲೋಕಸಭೆಯಲ್ಲಿ 288 ಸದಸ್ಯರು ಇದನ್ನು ಬೆಂಬಲಿಸಿದರು ಮತ್ತು 232 ಸದಸ್ಯರು ಅದರ ವಿರುದ್ಧ ಮತ ಚಲಾಯಿಸಿದರು. ಇದೀಗ ಕೊನೆಗೂ ರಾಷ್ಟ್ರಪತಿ ಅಂಕಿತ ದೊರಕಿದೆ.

ಹೊಸ ಕಾನೂನು ಪಕ್ಷಪಾತ, ವಕ್ಫ್ ಆಸ್ತಿಗಳ ದುರುಪಯೋಗ ಮತ್ತು ವಕ್ಫ್ ಆಸ್ತಿಗಳ ಮೇಲಿನ ಅತಿಕ್ರಮಣವನ್ನು ನಿಲ್ಲಿಸಲು ಪ್ರಯತ್ನಿಸುತ್ತದೆ ಎಂದು ಆಡಳಿತಾರೂಢ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಸರ್ಕಾರವು ಕಾನೂನು ಮುಸ್ಲಿಂ ವಿರೋಧಿಯಲ್ಲ ಎಂದು ಹೇಳಿದೆ.

ಈ ಹೊಸ ಕಾನೂನನ್ನು ಕಾಂಗ್ರೆಸ್, ಎಐಎಂಐಎಂ ಮತ್ತು ಆಮ್ ಆದ್ಮಿ ಪಕ್ಷ (ಎಎಪಿ) ಪ್ರತ್ಯೇಕ ಅರ್ಜಿಗಳ ಮೂಲಕ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿವೆ.(ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net