

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಕರ್ತವ್ಯಪಥದಲ್ಲಿ 74ನೇ ಗಣರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿದರು. ಈ ವೇಳೆ ಪ್ರಧಾನಿ ನರೇಂದ್ರ ಮೋದಿ, ಈ ಬಾರಿಯ ಗಣರಾಜ್ಯೋತ್ಸವದ ಮುಖ್ಯ ಅತಿಥಿಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಅಲ್ ಸಿಸಿ ಇದ್ದರು.
ರಾಷ್ಟ್ರ ರಾಜಧಾನಿಯಲ್ಲಿ 74ನೇ ಗಣರಾಜ್ಯೋತ್ಸವ ಸಂಭ್ರಮ ಕಳೆಗಟ್ಟಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬೆಳಗ್ಗೆ 10.30ಕ್ಕೆ ಧ್ವಜಾರೋಹಣ ನೇರವೇರಿಸಿದರು. ಈ ವೇಳೆ ಭಾರತೀಯ ಸೇನಾ ಪಡೆಯು ರಾಷ್ಟ್ರಪತಿಗಳಿಗೆ ಗೌರವ ವಂದನೆ ಸಲ್ಲಿಸಿತು.
ಇದಕ್ಕೂ ಮೊದಲು ಪ್ರಧಾನಿ ನರೇಂದ್ರ ಮೋದಿ, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಅಮರ್ ಜವಾನ್ ಜ್ಯೋತಿಗೆ ಆಗಮಿಸಿ ವೀರ ಮರಣವನ್ನಪ್ಪಿದ ಸೈನಿಕರಿಗೆ ಗೌರವ ಸಲ್ಲಿಸಿದರು. ಹುತಾತ್ಮ ಯೋಧರ ನೆನಪಿಗಾಗಿ ಕಟ್ಟಿಸಿರುವ ಅಮರ್ ಜವಾಬ್ ಜ್ಯೋತಿಯಲ್ಲಿ ಹುತಾತ್ಮ ಯೋಧರಿಗೆ ಪ್ರಧಾನಿ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್, 3 ಸೇನಾ ಮುಖ್ಯಸ್ಥರು ಗೌರವ ನಮನ ಸಲ್ಲಿಸಿದರು.