ನೆಹರು ಸ್ಮಾರಕ ವಸ್ತುಸಂಗ್ರಹಾಲಯದ ಮರುನಾಮಕರಣಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅನುಮೋದನೆ

nehru memorial
Published on

ನವದೆಹಲಿ: ನೆಹರೂ ಮೆಮೋರಿಯಲ್ ಮ್ಯೂಸಿಯಂ ಆಂಡ್ ಲೈಬ್ರರಿ (ಎನ್‌ಎಂಎಂಎಲ್) ಯನ್ನು ಪ್ರಧಾನ ಮಂತ್ರಿಗಳ ವಸ್ತುಸಂಗ್ರಹಾಲಯ ಮತ್ತು ಗ್ರಂಥಾಲಯ ಸಂಸ್ಥೆ ಎಂದು ಮರುನಾಮಕರಣ ಮಾಡಲು ರಾಷ್ಟ್ರಪತಿ ದ್ರೌಪದಿ ಮುರ್ಮು ಅನುಮೋದಿಸಿದ್ದಾರೆ. ಶುಕ್ರವಾರ ಈ ಕುರಿತು ಗೆಜೆಟ್ ಅಧಿಸೂಚನೆಯನ್ನೂ ಹೊರಡಿಸಲಾಗಿದೆ.

ಆಗಸ್ಟ್ 14 ರಂದು ಹೆಸರು ಬದಲಾವಣೆ

ಆಗಸ್ಟ್ 14 ರಂದು, ನೆಹರು ಸ್ಮಾರಕ ವಸ್ತುಸಂಗ್ರಹಾಲಯದ ಹೆಸರನ್ನು ಅಧಿಕೃತವಾಗಿ ಪ್ರೈಂ ಮಿನಿಸ್ಟರ್ ಮ್ಯೂಸಿಯಂ ಮತ್ತು ಲೈಬ್ರರಿ (PMML) ಸೊಸೈಟಿ ಎಂದು ಬದಲಾಯಿಸಲಾಯಿತು. ಜೂನ್‌ನಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಪ್ರಧಾನ ಮಂತ್ರಿಗಳ ವಸ್ತುಸಂಗ್ರಹಾಲಯ ಮಾಡುವ ಪ್ರಸ್ತಾವನೆಗೆ ಅನುಮೋದನೆ ನೀಡಲಾಗಿತ್ತು. ಕೊನೆಗೆ ರಾಷ್ಟ್ರಪತಿ ಮುರ್ಮು ಕೂಡ ಅನುಮೋದನೆ ನೀಡಿದ್ದಾರೆ.

ಪ್ರಧಾನಿ ಮೋದಿ ಅಧ್ಯಕ್ಷರಾಗಲಿದ್ದಾರೆ

ಕೇಂದ್ರ ಸರ್ಕಾರವು ಪಿಎಂಎಂಎಲ್ ಸೊಸೈಟಿಯನ್ನು ಮರುಸಂಘಟಿಸಿದೆ. ಇನ್ನು ಈ ಸೊಸೈಟಿಗೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷರಾಗಲಿದ್ದು, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಉಪಾಧ್ಯಕ್ಷರಾಗಲಿದ್ದಾರೆ. ಇವರೊಂದಿಗೆ ಗೃಹ ಸಚಿವ ಅಮಿತ್ ಶಾ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಪರಿಸರ ಸಚಿವ ಪ್ರಕಾಶ್ ಜಾವಡೇಕರ್, ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ರಮೇಶ್ ಪೋಖ್ರಿಯಾಲ್, ಕೇಂದ್ರ ಸಚಿವರಾದ ವಿ ಮುರಳೀಧರನ್, ಪ್ರಹ್ಲಾದ್ ಪಟೇಲ್, ಐಸಿಸಿಆರ್ ಅಧ್ಯಕ್ಷ ವಿನಯ್ ಸಹಸ್ರಬುದ್ಧೆ ಮೊದಲಾದವರು ಇದರ ಸದಸ್ಯರಾಗಿರುತ್ತಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net