ರಾಜ್ಯಸಭಾ ಸದಸ್ಯರಾಗಿ ಸುಧಾಮೂರ್ತಿ ನೇಮಕ

modi
Published on

ಬೆಂಗಳೂರು: ಉದ್ಯಮಿ ಮತ್ತು ಇನ್ಫೋಸಿಸ್ ಅಧ್ಯಕ್ಷ ನಾರಾಯಣ ಮೂರ್ತಿ ಅವರ ಪತ್ನಿ ಸುಧಾ ಮೂರ್ತಿ ಅವರನ್ನು ರಾಜ್ಯಸಭೆಗೆ ರಾಷ್ಟ್ರಪತಿಗಳು ನಾಮನಿರ್ದೇಶನ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ಶುಕ್ರವಾರ ತಮ್ಮ ಎಕ್ಸ್ ಪೇಜ್ (ಈ ಹಿಂದೆ ಟ್ವಿಟರ್) ನಲ್ಲಿ ಈ ಮಾಹಿತಿ ನೀಡಿದ್ದಾರೆ.

ಸುಧಾ ಮೂರ್ತಿ ಸಮಾಜ ಸೇವಕಿ ಮತ್ತು ಮೂರ್ತಿ ಟ್ರಸ್ಟ್‌ನ ಅಧ್ಯಕ್ಷೆ. ವಿವಿಧ ಕ್ಷೇತ್ರಗಳಲ್ಲಿ ಅವರ ಕೊಡುಗೆಯನ್ನು ಮೋದಿಯವರು ಶ್ಲಾಘಿಸಿದ್ದು,  "ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸುಧಾ ಮೂರ್ತಿ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿರುವುದು ನನಗೆ ಸಂತಸ ತಂದಿದೆ. ಸಮಾಜಸೇವೆ, ಲೋಕೋಪಕಾರ ಮತ್ತು ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸುಧಾ ಜಿಯವರ ಕೊಡುಗೆ ಅಪಾರ ಮತ್ತು ಸ್ಪೂರ್ತಿದಾಯಕವಾಗಿದೆ.

ರಾಜ್ಯಸಭೆಯಲ್ಲಿ ಅವರ ಉಪಸ್ಥಿತಿಯು ನಮ್ಮ 'ಮಹಿಳಾ ಶಕ್ತಿ'ಗೆ ಪ್ರಬಲ ಸಾಕ್ಷಿಯಾಗಿದೆ. ಇದು ನಮ್ಮ ದೇಶದ ಭವಿಷ್ಯವನ್ನು ರೂಪಿಸುವಲ್ಲಿ ಮಹಿಳೆಯರ ಶಕ್ತಿ ಮತ್ತು ಸಾಮರ್ಥ್ಯದ ಉದಾಹರಣೆಯಾಗಿದೆ. ಅವರ ಸಂಸದೀಯ ಅವಧಿ ಯಶಸ್ವಿಯಾಗಲಿ ಎಂದು ಹಾರೈಸುತ್ತೇನೆ" ಎಂದು ಮೋದಿಯವರು ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net