ರಾಷ್ಟ್ರಪತಿ ರಾಮನಾಥ ಕೋವಿಂದ್ ಹೃದಯದ ಶಸ್ತ್ರಚಿಕಿತ್ಸೆ ಯಶಸ್ವಿ

ramnath kovind
Published on

ನವದೆಹಲಿ: ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಯಶಸ್ವಿಯಾಗಿ ಹೃದಯದ ಶಸ್ತ್ರ ಚಿಕಿತ್ಸೆ ನಡೆದಿದೆ. ಕಳೆದ ಶನಿವಾರ ಅವರನ್ನು ದೆಹಲಿಯ ಏಮ್ಸ್​ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಂಗಳವಾರ ಟ್ವೀಟ್ ಮಾಡಿರುವ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಈ ವಿಷಯ ತಿಳಿಸಿದರು.

ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಏಮ್ಸ್ಸ ಪ್ರಕಟಣೆ ತಿಳಿಸಿದೆ. ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರಿಗೆ ಯಶಸ್ವಿಯಾಗಿ ಶಸ್ತ್ರ ಚಿಕಿತ್ಸೆ ನಡೆಸಿದ್ದಕ್ಕೆ ದೆಹಲಿಯ ಏಮ್ಸ್​ ವೈದ್ಯರಿಗೆ ರಾಜನಾಥ್ ಸಿಂಗ್ ಅವರು ಧನ್ಯವಾದ ತಿಳಿಸಿದ್ದು, ಬೇಗನೇ ಗುಣಮುಖರಾಗುವಂತೆ ಆಶಿಸಿದ್ದದಾರೆ.

ಕಳೆದ ಮಂಗಳವಾರ ಅವರು ವೈದ್ಯಕೀಯ ತಪಾಸಣೆಗಾಗಿ ದೆಹಲಿಯ ಸೇನಾ ಆಸ್ಪತ್ರೆಗೆ ದಾಖಲಾಗಿದ್ದರು. ಆ ವೇಳೆ ಅವರ ಹೃದಯದ ಕಾರ್ಯವಿಧಾನದಲ್ಲಿ ವ್ಯತ್ಯಾಸ ಕಂಡು ಬಂದಿದ್ದರಿಂದ ಸೇನಾ ಆಸ್ಪತ್ರೆ ವೈದ್ಯರು ಹೆಚ್ಚಿನ ಚಿಕಿತ್ಸೆಗೆ ಸೂಚಿಸಿದ್ದರು. ಹೀಗಾಗಿ ಅವರು ಶನಿವಾರ ಮಧ್ಯಾಹ್ನ ಏಮ್ಸ್​​ಗೆ ದಾಖಲಾಗಿದ್ದರು.

ರಾಷ್ಟ್ರಪತಿಗಳ ಆರೋಗ್ಯ ಸ್ಥಿರವಾಗಿದ್ದು, ಅವರು ಸದ್ಯಕ್ಕೆ ವಿಶ್ರಾಂತಿ ಪಡೆಯುತ್ತಿದ್ದಾರೆ ಎಂದು ರಾಷ್ಟ್ರಪತಿ ಭವನದ ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net