ಭಾರತ ರತ್ನ ಪ್ರಣಬ್ ಮುಖರ್ಜಿ ಅವರಿಗೆ ಅಂತಿಮ ನಮನ ಸಲ್ಲಿಸಿದ್ರು ರಾಷ್ಟ್ರಪತಿ, ಉಪರಾಷ್ಟ್ರಪತಿ, ಪ್ರಧಾನಿ

PM modi
Published on

ನವದೆಹಲಿ: ರಾಷ್ಟ್ರಪತಿ ರಾಮನಾಥ ಕೋವಿಂದ್, ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು, ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಬೆಳಗ್ಗೆ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಪಾರ್ಥಿವ ಶರೀರದ ದರ್ಶನ ಪಡೆದು ಅಂತಿಮ ನಮನ ಸಲ್ಲಿಸಿದ್ರು.

ಪ್ರಣಬ್ ಮುಖರ್ಜಿ ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕ ದರ್ಶನಕ್ಕಾಗಿ 10, ರಾಜಾಜಿ ಮಾರ್ಗದಲ್ಲಿರುವ ಅವರ ನಿವಾಸದಲ್ಲಿ ಇರಿಸಲಾಗಿದೆ. ನಿನ್ನೆ ಸಂಜೆ ಅವರು ಸೇನಾ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದರು.

ರಕ್ಷಣಾ ಸಚಿವ ರಾಜನಾಥ್ ಸಿಂಗ್, ಲೋಕಸಭೆ ಸ್ಪೀಕರ್ ಓಂ ಬಿರ್ಲಾ, ಚೀಫ್ ಆಫ್ ಡಿಫೆನ್ಸ್ ಜನರಲ್ ಬಿಪಿನ್ ರಾವತ್​, ಸೇನಾ ಮುಖ್ಯಸ್ಥ ಜನರಲ್ ಎಂ.ಎಂ.ನರವಣೆ, ಏರ್​ಚೀಫ್ ಮಾರ್ಷೆಲ್ ಆರ್ ಕೆ ಎಸ್​ ಭದುರಿಯಾ, ನೇವಿ ಚೀಫ್ ಅಡ್ಮಿರಲ್​ ಕರಂಬೀರ್ ಸಿಂಗ್ ಮತ್ತು ಇತರ ಗಣ್ಯರು ಪ್ರಣಬ್ ಅವರ ಪಾರ್ಥಿವ ಶರೀರದ ದರ್ಶನ ಪಡೆದು ಅಂತಿಮ ಗೌರವ ಸಲ್ಲಿಸಿದರು. ​(ಏಜೆನ್ಸೀಸ್)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net