ನಾಳೆ ರಾಷ್ಟ್ರಪತಿ ಚುನಾವಣೆ: ಎನ್​ಡಿಎ ಅಭ್ಯರ್ಥಿ ದ್ರೌಪದಿ ಮರ್ಮು ಗೆಲುವು ಬಹುತೇಕ ಖಚಿತ

Droupadimurmu
Published on

ನವದೆಹಲಿ: ಸೋಮವಾರ ರಾಷ್ಟ್ರಪತಿ ಚುನಾವಣೆ ನಡೆಯಲಿದ್ದು, ದೇಶದ ಸುಮಾರು 4800 ಚುನಾಯಿತ ಪ್ರತಿನಿಧಿಗಳು ಮತದಾನ ಮಾಡಲಿದ್ದಾರೆ. ಸಂಸತ್​ ಭವನ ಹಾಗೂ ರಾಜ್ಯ ವಿಧಾನಸಭೆಗಳಲ್ಲಿ ಮತದಾನ ನಡೆಯಲಿದೆ. ಜುಲೈ 21ರಂದು ಸಂಸತ್​ ಭವನದಲ್ಲಿ ಮತ ಎಣಿಕೆ ನಡೆಯಲಿದ್ದು, ಜುಲೈ 25ರಂದು ಮುಂದಿನ ರಾಷ್ಟ್ರಪತಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಎನ್​ಡಿಎ ಅಭ್ಯರ್ಥಿ ದ್ರೌಪದಿ ಮರ್ಮು ಅವರು ಗೆಲುವು ಬಹುತೇಕ ಖಚಿತವಾಗಿದ್ದು, ಶೇ.60ರಷ್ಟು ಮತಗಳನ್ನು ಪಡೆದು ವಿರೋಧ ಪಕ್ಷಗಳ ಅಭ್ಯರ್ಥಿ ಯಶವಂತ ಸಿನ್ಹಾ ಅವರನ್ನು ಸೋಲಿಸುವ ಸಾಧ್ಯತೆ ಇದೆ. ಒಟ್ಟು 10,86,431 ಮತಗಳ ಪೈಕಿ ವಿವಿಧ ಪ್ರಾದೇಶಿಕ ಪಕ್ಷಗಳ ಬೆಂಬಲದ ನಂತರ ಎನ್​ಡಿಎ ಅಭ್ಯರ್ಥಿ 6.67 ಲಕ್ಷಕ್ಕೂ ಹೆಚ್ಚು ಮತಗಳನ್ನು ಹೊಂದಿದ್ದಾರೆ.

ಈಗಾಗಲೇ ಎನ್​ಡಿಎಗೆ ವೈಎಸ್​ಆರ್​ ಕಾಂಗ್ರೆಸ್​, ಬಿಜು ಜನತಾದಳ, ಎಐಎಡಿಎಂಕೆ, ತೆಲುಗು ದೇಶಂ ಪಕ್ಷ, ಶಿರೋಮಣಿಅಕಾಲಿದಳ, ಶಿವಸೇನೆ ಸೇರಿದಂತೆ ಬಹುತೇಕ ಪ್ರಾದೇಶಿಕ ಪಕ್ಷಗಳು ಬೆಂಬಲ ಸೂಚಿಸಿರುವುದರಿಂದ ಮರ್ಮು ಅವರು ಗೆಲುವು ಸಾಧಿಸಲಿದ್ದಾರೆ. (ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net