ಎನ್​ಡಿಎ ರಾಷ್ಟ್ರಪತಿ ಅಭ್ಯರ್ಥಿ ಮರ್ಮು ಅವರಿಗೆ ಶಿವಸೇನೆ ಬೆಂಬಲ: ಉದ್ಧವ್​ ಠಾಕ್ರೆ ನೀಡಿದ ಕಾರಣ ಹೀಗಿದೆ

UdhavThackrey
Published on

ಮುಂಬೈ: ಮಹಾರಾಷ್ಟ್ರ ಸರ್ಕಾರ ರಚನೆಯಾದ ಬಳಿಕ ಇದೇ ಮೊದಲ ಬಾರಿಗೆ ಎನ್​ಡಿಎ ಪರವಾಗಿ ಶಿವಸೇನೆ ಹೇಳಿಕೆ ನೀಡಿದ್ದು, ಅಚ್ಚರಿ ಮೂಡಿಸಿದೆ. ಎನ್​ಡಿಎ ಮೈತ್ರಿಕೂಟದ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮರ್ಮು ಅವರನ್ನು ಬೆಂಬಲಿಸುವುದಾಗಿ ಶಿವಸೇನೆ ಘೋಷಿಸಿದೆ.

ಇದೇ ತಿಂಗಳ 18 ರಂದು ರಾಷ್ಟ್ರಪತಿ ಚುನಾವಣೆ ನಡೆಯಲಿದೆ. ಇನ್ನು ಈ ಕುರಿತು ಮಂಗಳವಾರ ಸಂಜೆ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪಕ್ಷದ ಅಧ್ಯಕ್ಷ ಉದ್ಧವ್​ ಠಾಕ್ರೆ, ಯಾವುದೇ ಒತ್ತಡವಿಲ್ಲದೇ ಮರ್ಮು ಅವರನ್ನು ಬೆಂಬಲಿಸಲು ಶಿವಸೇನೆ ನಿರ್ಧರಿಸಿದೆ ಎಂದು ತಿಳಿಸಿದ್ದಾರೆ.

ತಮ್ಮ ಸಂಸದರೂ ಕೂಡ ಇದಕ್ಕೆ ಸಮ್ಮತಿಸಿದ್ದು, ಮರ್ಮು ಅವರ ಬೆಂಬಲಕ್ಕೆ ನಾವು ತೀರ್ಮಾನಿಸಿದ್ದೇವೆ. ಮೊದಲ ಬಾರಿಗೆ ಬುಡಕಟ್ಟು ಸಮುದಾಯದ ಮಹಿಳೆಯೊಬ್ಬರು ರಾಷ್ಟ್ರಪತಿಯಾಗುವ ಅವಕಾಶವಿರುವಾಗ ಈ ನಿರ್ಧಾರಕ್ಕೆ ಬಂದಿದ್ದೇವೆ. ಪ್ರಸ್ತುತ ರಾಜಕೀಯ ಬೆಳವಣಿಗೆಯಲ್ಲಿ ನಾವು ಎನ್​ಡಿಎಗೆ ಬೆಂಬಲ ನೀಡಬಾರದು, ಆದರೆ ನಾವು ಅಷ್ಟು ಸಣ್ಣ ಮನಸ್ಥಿತಿ ಹೊಂದಿಲ್ಲ ಎಂದು ಹೇಳಿದ್ದಾರೆ. (ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net