೧೨ರಂದು ಚುಟುಕು ಸಾಹಿತ್ಯ ಸಮ್ಮೇಳನ - ಸಾಹಿತಿ ಮುಳಿಯ ಶಂಕರ ಭಟ್ಟ ಅಧ್ಯಕ್ಷತೆ

Published on

ವಿಟ್ಲ: ಚುಟುಕು ಸಾಹಿತ್ಯ ಪರಿಷತ್ತು ದ. ಕ. ಜಿಲ್ಲೆ, ಬಂಟ್ವಾಳ ತಾಲೂಕು ಹಾಗೂ ವಿಟ್ಠಲ ಎಜ್ಯುಕೇಶನಲ್ ಸೊಸೈಟಿ ಆಶ್ರಯದಲ್ಲಿ ಬಂಟ್ವಾಳ ತಾಲೂಕು ೬ನೇ ಚುಟುಕು ಸಾಹಿತ್ಯ ಸಮ್ಮೇಳನ ಜ.೧೨ರಂದು ಹಿರಿಯ ಸಾಹಿತಿ ಮುಳಿಯ ಶಂಕರ ಭಟ್ಟ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಸ್ವಾಗತ ಸಮಿತಿ ಅಧ್ಯಕ್ಷ ವೇಣುಗೋಪಾಲ ಶೆಟ್ಟಿ ಮರುವಾಳ ಹೇಳಿದರು.

ಬೆಳಗ್ಗೆ ೯ರಿಂದ ಮೆರವಣಿಗೆ, ೯.೩೦ಕ್ಕೆ ಉದ್ಘಾಟನಾ ಸಮಾರಂಭ ನಡೆಯಲಿದೆ. ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ ಹಾಗೂ ಪುಸ್ತಕ ಲೋಕಾರ್ಯಪಣೆ ನಡೆಯಲಿದೆ. ೧೧.೧೦ರಿಂದ ಮಕ್ಕಳ ಚುಟುಕುಗೋಷ್ಠಿ ನಡೆಯಲಿದ್ದು, ವಿಟ್ಠಲ ಪದವಿ ಪೂರ್ವ ಕಾಲೇಜು ಪ್ರಥಮ ವಿಜ್ಞಾನ ವಿಭಾಗದ ಧೃತಿ ಕಲ್ಲಾಜೆ ಅಧ್ಯಕ್ಷತೆ ವಹಿಸಲಿದ್ದಾರೆ. ೧೨.೨೦ರಿಂದ ವಿಚಾರಗೋಷ್ಠಿ ನಡೆಯಲಿದ್ದು, ಶಿಕ್ಷಕಿ ಸೀತಾಲಕ್ಷ್ಮೀ ವರ್ಮ ಅಧ್ಯಕ್ಷತೆ ವಹಿಸಲಿದ್ದಾರೆ. ಉಪನ್ಯಾಸಕ ರಘು ಇಡ್ಕಿದು, ಉಪನ್ಯಾಸಕಿ ಗೀತಾ ಕೊಂಕೊಡಿ ವಿಚಾರ ಮಂಡನೆ ಮಾಡಲಿದ್ದಾರೆ. ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದ್ದು, ಉದ್ಘಾಟನೆಯನ್ನು ಲಯನ್ಸ್ ಸೇವಾ ಟ್ರಸ್ಟ್ ಅಧ್ಯಕ್ಷ ಪ್ರಭಾಕರ ಶೆಟ್ಟಿ ನಡೆಸಲಿದ್ದಾರೆ. ವಿಟ್ಠಲ ಪ್ರೌಢ ಶಾಲೆಯ ಹಾಗೂ ವಿಟ್ಠಲ ಜೇಸೀಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಂದ ಭಾವಗೀತೆ, ಜನಪದ ಗೀತೆ, ನೃತ್ಯ ಕಾರ್ಯಕ್ರಮಗಳನ್ನು ಹಾಕಿಕೊಳ್ಳಲಾಗಿದೆ. ಮಧ್ಯಾಹ್ನ ೧ರಿಂದ ಯಕ್ಷಗಾನ ತಾಳಮದ್ದಳೆ ಶರಸೇತು ಬಂಧ ನಡೆಯಲಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಮಧ್ಯಾಹ್ನ ೨.೩೦ರಿಂದ ಹಿರಿಯರ ಚುಟುಕುಗೋಷ್ಠಿ ಪ್ರಶಸ್ತಿ ಪುರಸ್ಕೃತ ಶಿಕ್ಷಕಿ ಸುಧಾ ನಾಗೇಶ್ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಮಧ್ಯಾಹ್ನ ೩.೪೦ರಿಂದ ಮುಳಿಯ ಶಂಕರ ಭಟ್ಟ ಅಧ್ಯಕ್ಷತೆಯಲ್ಲಿ ಸಮಾರೋಪ ಸಮಾರಂಭ ನಡೆಯಲಿದ್ದು, ಕೆ.ಎಸ್.ಆರ್.ಟಿ.ಸಿ. ಕಾನೂನು ಅಽಕಾರಿ ನರಸಿಂಗ ವರ್ಮ ವಿಟ್ಲ ಅರಮನೆ ಸಮಾರೋಪ ಭಾಷಣ ಮಾಡಲಿದ್ದಾರೆ ಎಂದರು.

ಬಂಟ್ವಾಳ ತಾಲೂಕು ಚುಟುಕು ಸಾಹಿತ್ಯ ಪರಿಷತ್ತು ಅಧ್ಯಕ್ಷ ಆನಂದ ರೈ ಅಡ್ಕಸ್ಥಳ, ಸ್ವಾಗತ ಸಮಿತಿ ಕಾರ್ಯದರ್ಶಿ ರಾಜಾರಾಮ ವರ್ಮ ವಿಟ್ಲ, ಕೋಶಾಽಕಾರಿ ಸೀತಾಲಕ್ಷ್ಮೀ ವರ್ಮ ವಿಟ್ಲ, ಉಪಾಧ್ಯಕ್ಷ ವಿಷ್ಣುಗುಪ್ತ ಪುಣಚ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net