ಪ್ರಕರಣ ಕೈಬಿಡಲು ಸರ್ಕಾರದ ಮೇಲೆ ಒತ್ತಡ

UvL5IQ3s_400x400
Published on

ಬೆಂಗಳೂರು: ಕಾವೇರಿ, ಮೇಕೆದಾಟು ಪಾದಯಾತ್ರೆ ಸೇರಿದಂತೆ ವಿವಿಧ ನಾಡಿನ ಹಿತರಕ್ಷಣೆಯ ಹೋರಾಟಗಳಲ್ಲಿ ಭಾಗವಹಿಸಿದ ಹೋರಾಟಗಾರರ ಮೇಲೆ ದಾಖಲಿಸಿರುವ ಪ್ರಕರಣಗಳನ್ನು ಹಿಂಪಡೆಯುವಂತೆ ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಗೃಹ ಸಚಿವರಿಗೆ ಪತ್ರ ಬರೆದಿರುವ ಅವರು, ಕಾವೇರಿ ನೀರಿಗೆ ಸಂಬಂಧಿಸಿದಂತೆ ಮೇಕೆದಾಟು ಹಾಗೂ ಇನ್ನಿತರೆ ವಿಷಯಗಳಿಗೆ ಸಾಕಷ್ಟು ಧರಣಿಗಳು, ಪ್ರತಿಭಟನೆಗಳು ಹಾಗೂ ಪಾದಯಾತ್ರೆಗಳು ನಡೆದಿದ್ದು, ಅಂದಿನ ಬಿಜೆಪಿ ಸರ್ಕಾರವು ಹೋರಾಟದ ಕಿಚ್ಚನ್ನು ನಿಯಂತ್ರಿಸಲು ಶಾಸಕರು, ಮಾಜಿ ಶಾಸಕರು, ಹಿರಿಯ ರಾಜಕಾರಣಿಗಳು, ಮುಖಂಡರುಗಳು, ರೈತ ಹೋರಾಟಗಾರರು, ಕನ್ನಡ ಪರ ಸಂಘಟನೆಗಳು ಹಾಗೂ ಸಾರ್ವಜನಿಕರ ಮೇಲೆ ಸುಳ್ಳು ಪ್ರಕರಣ ದಾಖಲು ಮಾಡಲಾಗಿದೆ. ಇದರಿಂದಾಗಿ ಹಲವರು ಇಂದಿಗೂ ವಿನಾಕಾರಣ ನ್ಯಾಯಾಲಯಗಳಲ್ಲಿ ಅಲೆದಾಡುತ್ತಿದ್ದು, ಹೀಗಾಗಿ ಪ್ರಕರಣದಲ್ಲಿರುವವರು ಸೇರಿದಂತೆ ಕುಟುಂಬದವರು ಇದರಿಂದ ಸಾಕಷ್ಟು ಸಮಸ್ಯೆಯನ್ನು ಎದುರಿಸುತ್ತಿದ್ದಾರೆ ಎಂದು ಪತ್ರದಲ್ಲಿ ವಿವರಿಸಿದ್ದಾರೆ.

ಇಂತಹ ಹಲವಾರು ಪ್ರಕರಣಗಳ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚೆಗೆ ತಂದು ಮರು ಪರಿಶೀಲನೆ ನಡೆಸಿ ದಾಖಲಾಗಿರುವ ಪ್ರಕರಣಗಳನ್ನು ಜರೂರಾಗಿ ಕೈಬಿಡಬೇಕೆಂದು ಒತ್ತಾಯಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net