ನಕಲಿ ಕಾರ್ಮಿಕರ ಹಾವಳಿ ತಡೆಗಟ್ಟಿ

sgr k (1)
ಸಾಗರದಲ್ಲಿ ಬ್ಲಾಕ್ ಕಾಂಗ್ರೆಸ್ ಅಸಂಘಟಿತ ಕಾರ್ಮಿಕರ ಘಟಕದಿಂದ ಆಯೋಜಿಸಿದ್ದ ಕಾರ್ಮಿಕ ದಿನಾಚರಣೆಯಲ್ಲಿ ವಿವಿಧ ಕ್ಷೇತ್ರದ ಕಾರ್ಮಿಕರನ್ನು ಸನ್ಮಾನಿಸಲಾಯಿತು. ಕೆ.ಸಿದ್ದಪ್ಪ, ಬಿ.ಎಂ.ರಜನಿಕಾಂತ್, ಫಯಾಜ್, ಧರ್ಮಪ್ಪ ಇತರರಿದ್ದರು.
Published on

ಸಾಗರ: ಯೋಧರು, ರೈತರು ಮತ್ತು ಕಾರ್ಮಿಕರು ದೇಶವನ್ನು ಸದೃಢಗೊಳಿಸುವ ಮೂರು ಪ್ರಮುಖ ಶಕ್ತಿಗಳು. ಇವರಿಗೆ ಆದ್ಯತೆ ನೀಡಬೇಕಾದುದು ನಮ್ಮ ಕರ್ತವ್ಯ ಎಂದು ಬ್ಲಾಕ್ ಕಾಂಗ್ರೆಸ್ ಅಸಂಘಟಿತ ಕಾರ್ಮಿಕರ ಘಟಕದ ಅಧ್ಯಕ್ಷ ಕೆ.ಸಿದ್ದಪ್ಪ ಹೇಳಿದರು.

ಸಾಗರದ ಇಂಡಸ್ಟ್ರಿಯಲ್ ಏರಿಯಾದಲ್ಲಿ ಗುರುವಾರ ಬ್ಲಾಕ್ ಕಾಂಗ್ರೆಸ್‌ನ ಅಸಂಘಟಿತ ಕಾರ್ಮಿಕರ ಘಟಕದಿಂದ ಆಯೋಜಿಸಿದ್ದ ಕಾರ್ಮಿಕ ದಿನಾಚರಣೆ ಅಂಗವಾಗಿ ವಿವಿಧ ಕ್ಷೇತ್ರದ ಕಾರ್ಮಿಕರನ್ನು ಸನ್ಮಾನಿಸಿ ಮಾತನಾಡಿದರು.

ದೇಶದಲ್ಲಿ ಕಾರ್ಮಿಕ ಶಕ್ತಿ ಸದ್ಬಳಕೆಯಾಗುತ್ತಿದೆ. ಆದರೆ ಕಾರ್ಮಿಕರಿಗೆ ಸಿಗಬೇಕಾದ ಮೂಲ ಸೌಲಭ್ಯ ಪೂರ್ಣ ಪ್ರಮಾಣದಲ್ಲಿ ತಲುಪುತ್ತಿಲ್ಲ. ವಿವಿಧ ಹಂತದ ಕಾರ್ಮಿಕರ ಬೇಕು ಬೇಡಗಳನ್ನು ಗಮನಿಸುವ ಸ್ಥಿತಿ ರಾಜ್ಯದಲ್ಲಿದೆ. ಕಾರ್ಮಿಕರಿಗೆ ಸಿಗಬೇಕಾದ ಕೆಲವು ಯೋಜನೆಗಳು ನಕಲಿ ಕಾರ್ಮಿಕರ ಪಾಲಾಗುತ್ತಿರುವುದು ದುರದೃಷ್ಟಕರ ಸಂಗತಿ ಎಂದರು.

ಕಾರ್ಮಿಕರಿಗೆ ಉಚಿತವಾಗಿ ಆರೋಗ್ಯ ಸೇವೆ ಸಿಗುವಂತೆ ಆಗಬೇಕು. ಕಾರ್ಮಿಕರಿಗೆ ಆರೋಗ್ಯ ಸೇವೆ ಸಿಗುತ್ತಿದ್ದರೂ ಅದು ಅಗತ್ಯ ಸಂದರ್ಭದಲ್ಲಿ ಸಿಗುತ್ತಿಲ್ಲ. ಕಾರ್ಮಿಕರು ಕಾಯಿಲೆ ಬಿದ್ದಾಗ, ಅಪಘಾತವಾದಾಗ ಆರೋಗ್ಯ ಸೇವೆಗೆ ಪರದಾಡುತ್ತಿದ್ದಾರೆ. ಹಣಕಾಸು ಇಲ್ಲದೆ ಸಂಕಷ್ಟ ಎದುರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕಾರ್ಮಿಕ ಕಾರ್ಡ್ಗೆ ಆರೋಗ್ಯ ಸೇವೆ ಸಿಗಬೇಕು. ಈ ಕುರಿತು ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ ಎಂದು ಹೇಳಿದರು.

ಪ್ರಭಾಕರ್ ಆಚಾರ್, ಮುನಾಫ್, ರತ್ನಮ್ಮ, ಅಜಯ್, ಫಯಾಜ್ ಅವರನ್ನು ಸನ್ಮಾನಿಸಲಾಯಿತು. ಮಲೆನಾಡು ಸಣ್ಣ ಕೈಗಾರಿಕೆಗಳ ಮಾಲೀಕರು ಮತ್ತು ಕಾರ್ಮಿಕರ ಸಂಘದ ಬಿ.ಎಂ.ರಜನಿಕಾಂತ್, ಫಯಾಜ್, ಧರ್ಮಪ್ಪ, ರಫೀಕ್, ನಿಖಿಲ್ ಇತರರಿದ್ದರು

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net