

ಬೆಂಗಳೂರು ಸರ್ಕಾರಿ ಪ್ರಾಥಮಿಕ ಶಾಲಾ ಸಹ ಶಿಕ್ಷಕರಿಂದ ಮುಖ್ಯ ಶಿಕ್ಷಕರ ಹುದ್ದೆಗೆ ಹಾಗೂ ಮುಖ್ಯ ಶಿಕ್ಷಕರಿಂದ ಹಿರಿಯ ಮುಖ್ಯ ಶಿಕ್ಷಕರ ಹುದ್ದೆಗೆ ಕೌನ್ಸೆಲಿಂಗ್ ಮೂಲಕ ಬಡ್ತಿ ನೀಡಲು ಶಾಲಾ ಶಿಕ್ಷಣ ಇಲಾಖೆಯು ನೂತನ ವೇಳಾಪಟ್ಟಿಯನ್ನು ಪ್ರಕಟಿಸಿದೆ.
2023-24ನೇ ಸಾಲಿನಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ‘ಸಿ’ ವೃಂದದ ಹುದ್ದೆಗಳಿಗೆ ಬಡ್ತಿ ನೀಡುವ ಸಂಬಂಧ ಕಳೆದ ತಿಂಗಳು ನಡೆಯಬೇಕಿದ್ದ ಕೌನ್ಸೆಲಿಂಗ್ ಪ್ರಕ್ರಿಯೆಯನ್ನು ಇಲಾಖೆಯು ಮುಂದೂಡಿತ್ತು. ಇದೀಗ ಹೊಸ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಫೆ.13ರಿಂದ 26ರ ವರೆಗೆ ನಡೆಸುತ್ತಿದೆ.
ಫೆ.13- ಬಡ್ತಿಗೆ ಅಗತ್ಯವಿರುವ ಖಾಲಿ ಹುದ್ದೆಗಳನ್ನು ಜಿಲ್ಲಾ ಮಂಜೂರಾತಿ ಹುದ್ದೆಗಳಿಗೆ ಮೀರದಂತೆ ಕರ್ತವ್ಯನಿರತ ಹುದ್ದೆಗಳನ್ನು ಪರಿಗಣಿಸಿ ಅಂತಿಮವಾಗಿ ಬಡ್ತಿಗೆ ಪರಿಗಣಿಸಬೇಕಾದ ಖಾಲಿ ಹುದ್ದೆಗಳ ಪ್ರಕಟಿಸುವುದು.
ಫೆ.14- ಅರ್ಹರ 1:2ರ ಅಂತಿಮ ತಾತ್ಕಾಲಿಕ ಜ್ಯೇಷ್ಠತಾ ಪಟ್ಟಿ ಪ್ರಕಟಿಸುವುದು.
ಫೆ.16- ಅಂತಿಮ ಆದ್ಯತಾ ಪಟ್ಟಿಯಲ್ಲಿ ಬಡ್ತಿ ಮೀಸಲಾತಿಗೆ ಬಿಂದು ಮತ್ತು ರೋಸ್ಟರ್ ಗುರುತಿಸುವಿಕೆಯ ಕ್ರಮವನ್ನು ಅಂತಿಮಗೊಳಿಸುವುದು ಹಾಗೂ ಜಿಲ್ಲಾ ಹಂತದಲ್ಲಿ ಸಭೆ ನಡೆಸಿ ಬಡ್ತಿಗೆ ಅರ್ಹರಿರುವ ಶಿಕ್ಷಕರ ಪಟ್ಟಿಗೆ ಅನುಮೋದನೆ ನೀಡುವುದು
ಫೆ.15ರಿಂದ 17- ತಾತ್ಕಾಲಿಕ ಜ್ಯೇಷ್ಠತಾ ಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಶಿಕ್ಷಕರಿಗೆ ಅವಕಾಶ ಕಲ್ಪಿಸುವುದು
ಫೆ.26- ಹಿರಿಯ ಮುಖ್ಯ ಶಿಕ್ಷಕರ ವೃಂದಕ್ಕೆ ಬಡ್ತಿ ಕೌನ್ಸೆಲಿಂಗ್
ಫೆ.26- ಮುಖ್ಯ ಶಿಕ್ಷಕರ ಹುದ್ದೆಗೆ ಕೌನ್ಸೆಲಿಂಗ್