ಮೇ 17ರ ನಂತರವೂ ಲಾಕ್​ಡೌನ್​ ವಿಸ್ತರಣೆ ಸುಳಿವು ನೀಡಿರುವ ಪ್ರಧಾನಿ

PM modi
Published on

ನವದೆಹಲಿ: ಕರೊನಾ ವೈರಸ್​ ಹರಡುವುದನ್ನು ನಿಯಂತ್ರಿಸಲು ಜಾರಿಗೊಳಿಸಿರುವ ಲಾಕ್​ಡೌನ್​ ಅನ್ನು ಮೇ. 17ರ ನಂತರವೂ ಮುಂದುವರೆಸುವ ಸುಳಿವನ್ನು ಪ್ರಧಾನಿ ನರೇಂದ್ರ ಮೋದಿ ಅವರು ವ್ಯಕ್ತಪಡಿಸಿದ್ದಾರೆ ಎಂದು ತಿಳಿದು ಬಂದಿದೆ.

ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿದ ಬಳಿಕ ಅವರು ಲಾಕ್​ಡೌನ್​ ವಿಸ್ತರಿಸುವ ಯೋಜನೆ ಇದೆ ಎಂದು ಮೂಲಗಳು ತಿಳಿಸಿವೆ.

ಕರ್ನಾಟಕ ಸೇರಿದಂತೆ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಜತೆ ಪ್ರಧಾನಿ ನರೇಂದ್ರ ಮೋದಿ ಅವರು ಸತತ 6 ತಾಸು ವಿಡಿಯೋ ಕಾನ್ಫರೆನ್ಸ್ ನಡೆಸಿದರು. ಕೇರಳ, ಪಂಜಾಬ್​ ಸೇರಿದಂತೆ ಸೋಂಕು ನಿಯಂತ್ರಣದಲ್ಲಿರುವ ರಾಜ್ಯಗಳ ಮುಖ್ಯಮಂತ್ರಿಗಳು ಲಾಕ್​ಡೌನ್​ ನಿಯಮಗಳನ್ನು ಸರಳಗೊಳಿಸಬೇಕು ಎಂದು ಮನವಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಕೆಲವು ರಾಜ್ಯಗಳು ಇನ್ನಷ್ಟು ದಿನ ಲಾಕ್​ಡೌನ್​ ವಿಸ್ತರಣೆ ಮಾಡಬೇಕು ಎಂಬ ಇಂಗಿತ ವ್ಯಕ್ತಪಡಿಸಿವೆ.

ಎಲ್ಲರ ಅಭಿಪ್ರಾಯವನ್ನು ಸಂಗ್ರಹಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ಕರೊನಾ ವೈರಸ್​ ಸೋಂಕನ್ನು ಸಂಪೂರ್ಣವಾಗಿ ಹತೋಟಿಗೆ ತರಲು ಇನ್ನಷ್ಟು ದಿನ ಲಾಕ್​ಡೌನ್​​ ಮುಂದುವರೆಸುವ ಯೋಜನೆ ಇದೆ. ಶೀಘ್ರದಲ್ಲೇ ಅವರು ಪ್ರಕಟಿಸಲಿದ್ದಾರೆ ಎಂದು ತಿಳಿದು ಬಂದಿದೆ (ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net