

ಅಹಮದಾಬಾದ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಗಮನಕ್ಕೆ ಇನ್ನೇನು ಕೆಲವೇ ಹೊತ್ತು ಬಾಕಿ ಇರುವಾಗ ಪ್ರಧಾನಿ ನರೇಂದ್ರ ಮೋದಿಯವರು ಅಹಮದಾಬಾದ್ಗೆ ಬಂದಿಳಿದಿದ್ದಾರೆ.
ಸುಮಾರು 11.40ರ ವೇಳೆಗೆ ಡೊನಾಲ್ಡ್ ಟ್ರಂಪ್ ಅವರು ತಮ್ಮ ಕುಟುಂಬ ಹಾಗೂ ಉನ್ನತ ಮಟ್ಟದ ಅಧಿಕಾರಿಗಳನ್ನೊಳಗೊಂಡ ಆಯೋಗದೊಂದಿಗೆ ಅಹಮದಾಬಾದ್ನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ತಲುಪಲಿದ್ದಾರೆ.
ಭಾರತೀಯ ವಾಯು ಸೇನಾ ವಿಮಾನದ ಮೂಲಕ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿಯವರಿಗೆ ಹಿರಿಯ ಪೊಲೀಸ್ ಅಧಿಕಾರಿಗಳು, ರಕ್ಷಣಾ ಪಡೆ ಅಧಿಕಾರಿಗಳು ಸ್ವಾಗತ ಕೋರಿದರು. (ಏಜೆನ್ಸೀಸ್)