ಎಲ್ಲ ರಾಜ್ಯಗಳ ಸಿಎಂ ಜತೆ ಏ.27ರಂದು ಪ್ರಧಾನಿ ಮೋದಿ ವಿಡಿಯೋ ಕಾನ್ಫರೆನ್ಸ್​ ಮೂಲಕ ಸಂವಾದ : ಲಾಕ್​ಡೌನ್ ಬಗ್ಗೆ ಚರ್ಚೆ

smart lockdown
Published on

ನವದೆಹಲಿ: ರಾಷ್ಟ್ರದಲ್ಲಿ ಜಾರಿಯಾಗಿರುವ ಲಾಕ್​ಡೌನ್​ ಅವಧಿ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಏ. 27ರ ಸೋಮವಾರ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಮತ್ತೊಂದು ಸುತ್ತಿನ ಸಂವಾದ ನಡೆಸಲಿದ್ದಾರೆ.

ಕರೊನಾ ವೈರಸ್​ ನಿಯಂತ್ರಣ, ಲಾಕ್​ಡೌನ್​ ಅಂತ್ಯಗೊಳಿಸಬೇಕೆ, ಅಥವಾ ಮುಂದುವರೆಸಬೇಕೆ? ಯಾವ ಕ್ಷೇತ್ರಗಳಿಗೆ ಲಾಕ್​ಡೌನ್​ನಿಂದ ವಿನಾಯಿತಿ ನೀಡಬೇಕು ಎಂಬುದರ ಬಗ್ಗೆ ಅವರು ವಿಡಿಯೋ ಕಾನ್ಫರೆನ್ಸ್​ ಮೂಲಕ ರಾಷ್ಟ್ರದ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಂವಾದ ನಡೆಲಿದ್ದಾರೆ.

ರಾಷ್ಟ್ರದಲ್ಲಿ ಬುಧವಾರ ಸಂಜೆ ವೇಳೆಗೆ 20,471 ಮಂದಿಗೆ ಕರೊನಾ ವೈರಸ್​ ಸೋಂಕು ತಗುಲಿದ್ದು, ಇವರದಲ್ಲಿ 652 ಮಂದಿ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಕೇರಳ, ಕರ್ನಾಟಕ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೆಲವೊಂದು ರಿಯಾಯಿತಿ ದೊರೆಯಬಹುದು ಎಂದು ನಿರೀಕ್ಷಿಸಲಾಗಿದೆ. (ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net