ಪ್ರಧಾನಿ ಹುದ್ದೆಗೆ ನರೇಂದ್ರ ಮೋದಿ ರಾಜೀನಾಮೆ

modi
Published on

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿ ತಮ್ಮ ರಾಜೀನಾಮೆ  ಸಲ್ಲಿಸಿದರು.

ರಾಷ್ಟ್ರಪತಿಗಳು ರಾಜೀನಾಮೆ ಅಂಗೀಕರಿಸಿದ್ದಾರೆ. 17ನೇ ಲೋಕಸಭೆ ವಿಸರ್ಜನೆಯ ಆಗಬೇಕಿರುವ ಹಿನ್ನೆಲೆಯಲ್ಲಿ ಅವರು ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ.

ಸದ್ಯ ಮೋದಿಯವರು ಉಸ್ತುವಾರಿ ಪ್ರಧಾನಿಯಾಗಿ ಮುಂದುವರಿಯಲಿದ್ದು, ಜೂನ್‌ 8ರಂದು ನೂತನ ಸರಕಾರದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ. ರಾಷ್ಟ್ರಪತಿಗಳು ನೂತನ ಪ್ರಧಾನಿ ಹಾಗೂ ಸಚಿವರಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net