

ಬೆಂಗಳೂರು: ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಏ. 6 ರಂದು ಬೆಳಗ್ಗೆ 10.30ಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಲಿದ್ದಾರೆ.
ಪಕ್ಷದ ಸಂಸ್ಥಾಪನಾ ದಿನಾಚರಣೆ ನಿಮಿತ್ತ ಪಕ್ಷದ ಸೇವಾ ಸಂಕಲ್ಪ, ಸಿದ್ಧಾಂತ ಕುರಿತು ಕಾರ್ಯಕರ್ತರಿಗೆ ಕಿವಿಮಾತು ಹೇಳಲಿದ್ದಾರೆ. ಇದೇ ವೇಳೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಭಾಷಣ ಮಾಡಲಿದ್ದಾರೆ ಎಂದು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ತಿಳಿಸಿದ್ದಾರೆ.
ಈ ಕಾರ್ಯಕ್ರಮವು www.bjplive.org, twitter.com/BJP4India, facebook.com/BJP4India, youtube.com/BJP4India, www.bjp.org ಮತ್ತಿತರ ಸಾಮಾಜಿಕ ಜಾಲತಾಣಗಳನ್ನು ನೇರಪ್ರಸಾರವಾಗಲಿದೆ.
ರಚನಾತ್ಮಕ ಕಾರ್ಯಕ್ರಮ: ಪಕ್ಷದ ಸ್ಥಾಪನಾ ದಿನದಂದು ಸ್ವಚ್ಛತಾ ಕಾರ್ಯಕ್ರಮ, ಏಕ ಬಳಕೆ ಪ್ಲಾಸ್ಟಿಕ್ ಬಳಕೆ ಉಪಯೋಗವನ್ನು ತೊರೆಯುವ ಸಂಕಲ್ಪ, ಹಿರಿಯ ನಾಗರಿಕರಿಗೆ ಸನ್ಮಾನ ಹಾಗೂ ಸಾಧಕ ವಿದ್ಯಾರ್ಥಿಗಳಿಗೆ ಗೌರವದಂಥ ಯಾವುದಾದರೊಂದು ರಚನಾತ್ಮಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು. ಪಕ್ಷದ ಸ್ಥಾಪನೆ, ವಿಕಾಸದ ಹಾದಿಯ ಕುರಿತು ಚರ್ಚಿಸಲಾಗುವುದು ಎಂದು ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ. ಕೇಂದ್ರ ಸರಕಾರದ ಅಭಿವೃದ್ಧಿ ಯೋಜನೆಗಳು ಮತ್ತು ಅವುಗಳ ಅನುಷ್ಠಾನದ ಕುರಿತು ಚರ್ಚಿಸಲಾಗುವುದು ಎಂದು ಹೇಳಿದ್ದಾರೆ.