ಚಿಕ್ಕಪೇಟೆ ಶಾಸಕರ ನಿವಾಸದ ಕೃಷ್ಣ ಜನ್ಮಾಷ್ಟಮಿ ಸಂಭ್ರಮದಲ್ಲಿ ಬ್ರಿಟನ್‌ ಪ್ರಧಾನಿ ರಿಷಿ ಸುನಕ್‌ ತಾಯಿ ಭಾಗಿ

Prime Minister of the United Kingdom Rishi Sunak's mother is Usha Sunak (3)
Published on

ಬೆಂಗಳೂರು: ಬ್ರಿಟನ್‌ ಪ್ರಧಾನಿ ರಿಷಿ ಸುನಕ್‌ ಅವರ ತಾಯಿ ಉಷಾ ಸುನಕ್‌ ಅವರು ನಗರದಲ್ಲಿಂದು  ಶ್ರೀ ಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚಾರಣೆಯಲ್ಲಿ ಪಾಲ್ಗೊಂಡಿದ್ದಾರೆ.

ಶ್ರೀ ಕೃಷ್ಣ ಜನ್ಮಾಷ್ಟಮಿ ಹಿನ್ನೆಲೆಯಲ್ಲಿ ಕಳೆದ ಒಂದು ವಾರದಿಂದ ಚಿಕ್ಕಪೇಟೆ ಶಾಸಕ ಡಾ. ಉದಯ್‌ ಬಿ ಗರುಡಾಚಾರ್‌ ಅವರ ಜಯನಗರದ ನಿವಾಸದಲ್ಲಿ ಕೃಷ್ಣನ ವಿವಿಧ ಮೂರ್ತಿಗಳನ್ನು ಪ್ರತಿಷ್ಠಾಪಿಸಿದ್ದು, ಉಷಾ ಸುನಕ್ ಅವರು ಕೃಷ್ಣನ ವೈಶಿಷ್ಟ್ಯಗಳನ್ನು ಕಣ್ತುಂಬಿಕೊಂಡರು. ಈ ಸಂದರ್ಭದಲ್ಲಿ ಉಷಾ ಸುನಕ್‌ ಸಾಂಪ್ರದಾಯಿಕವಾಗಿ ಕೃಷ್ಣನಿಗೆ ಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ಸುಧಾ ಮೂರ್ತಿ, ಡಾ. ಉದಯ್‌ ಗರುಡಾಚಾರ್, ಮೇದಿನಿ ಉದಯ್‌ ಗರುಡಾಚಾರ್‌, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಮುಖರಾದ ವಿ. ಮಂಜುನಾಥ್‌, ವಿವಿಧ ನಿವಾಸಿಗಳ ಕಲ್ಯಾಣ ಸಂಘದ ಸದಸ್ಯರು ಭಾಗವಹಿಸಿದ್ದರು.

ದೆಹಲಿಯಲ್ಲಿ ನಡೆಯುತ್ತಿರುವ G-20 ಶೃಂಗ ಸಭೆ ಹಿನ್ನೆಲೆಯಲ್ಲಿ ಬ್ರಿಟನ್‌ ಪ್ರಧಾನಿ ರಿಷಿ ಸುನಕ್‌ ಅವರು ಕುಟುಂಬ ಸಮೇತ ಭಾರತಕ್ಕೆ ಭೇಟಿ ನೀಡಿದ್ದಾರೆ. ದೆಹಲಿಗೆ ಆಗಮಿಸಿದ ಉಷಾ ಸುನಕ್‌ ಅವರು ಬೆಂಗಳೂರಿನ ತಮ್ಮ ಬೀಗರ ಮನೆಗೆ ಆಗಮಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net