ಪ್ರಧಾನಮಂತ್ರಿ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಕೆಗೆ ಅ. 30 ಕಡೇ ದಿನ..

pmm
Published on

ಬೆಂಗಳೂರು: ಪ್ರಧಾನ ಮಂತ್ರಿ ವಿದ್ಯಾರ್ಥಿ ವೇತನ (PMSS) ಯೋಜನೆಯಡಿ 2022-23ನೇ ಸಾಲಿನಲ್ಲಿ ನಕ್ಸಲ್ ದಾಳಿಯಲ್ಲಿ ಮೃತಪಟ್ಟಿರುವ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡಲು ಸರ್ಕಾರದಿಂದ ತೀರ್ಮಾನಿಸಲಾಗಿದೆ. ಇಂತಹ ಕುಟುಂಬಗಳಲ್ಲಿ ಅರ್ಹ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ ಈ ವೇತನವನ್ನು ನೀಡಲಾಗುತ್ತಿದೆ.

ಇದಕ್ಕಾಗಿ ನೇರವಾಗಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. ಅಕ್ಟೋಬರ್​​ 30ರ ಒಳಗಾಗಿ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬೇಕೆಂದು ನವದೆಹಲಿಯ ಕಲ್ಯಾಣ ಮತ್ತು ಪುನರ್ವಸತಿ ಮಂಡಳಿಯ ಕಾರ್ಯದರ್ಶಿ ತಿಳಿಸಿದ್ದಾರೆ.

ಇದರ ಕುರಿತು ಹೆಚ್ಚಿನ ಮಾಹಿತಿಗಾಗಿ ಭೇಟಿ ನೀಡಬಹುದು.https://www.warb-mha.gov.in/

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net