ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಆದ್ಯತೆ

hos mla
ಹೊಸನಗರ ತಾಲೂಕಿನ ಯಡೂರಿನಲ್ಲಿ ಶಾಸಕ ಆರಗ ಜ್ಞಾನೇಂದ್ರ ಅವರನ್ನು ಸನ್ಮಾನಿಸಲಾಯಿತು. ಮಂಜುನಾಥ್, ನರೇಂದ್ರಕುಮಾರ್, ಎಚ್.ಡಿ.ಜಯಪ್ರಕಾಶ್, ಶ್ರುತಿ ಶೇಷಾದ್ರಿ ಇತರರಿದ್ದರು.
Published on

ಹೊಸನಗರ: ತಾಲೂಕಿನ ಉತ್ತಮ ಪ್ರೌಢಶಾಲೆ ಎಂದು ಗುರುತಿಸಿಕೊಂಡಿರುವ ಯಡೂರು ಶಾಲೆ ಅಭಿವೃದ್ಧಿಗೆ 5 ವರ್ಷದಲ್ಲಿ 1.36 ಕೋಟಿ ರೂ. ಅನುದಾನ ಒದಗಿಸಿದ ಶಾಸಕ ಆರಗ ಜ್ಞಾನೇಂದ್ರ ಅವರನ್ನು ಗೌರವಿಸಲಾಯಿತು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಆರಗ ಜ್ಞಾನೇಂದ್ರ, ಯಡೂರು ಪ್ರೌಢಶಾಲೆ ಗುಣಮಟ್ಟದ ಶಿಕ್ಷಣ ನೀಡುತ್ತಿದೆ. ಶಾಲೆಗಳ ಅಭಿವೃದ್ಧಿಗೆ ನನ್ನ ಅವಧಿಯಲ್ಲಿ ವಿಶೇಷ ಒತ್ತು ನೀಡಿದ್ದೇನೆ. ಅಲ್ಲದೆ ಯಡೂರು ಸುಳುಗೋಡು ಗ್ರಾಪಂ ವ್ಯಾಪ್ತಿಯಲ್ಲಿ ಅಭಿವೃದ್ಧಿಗೆ ಶಕ್ತಿ ಮೀರಿ ಅನುದಾನ ನೀಡಿದ್ದೇನೆ ಎಂದರು.

ಯಡೂರು ಗ್ರಾಮ ಪಂಚಾಯಿತಿ ಕಟ್ಟಡ, ಸುಳುಗೊಡು ಅಂಗನವಾಡಿ ನೂತನ ಕಟ್ಟಡಕ್ಕೆ ಗುದ್ದಲಿಪೂಜೆ ನೆರವೇರಿಸಿದರು. ಯಡೂರು ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡಿ ಎಸ್‌ಎಸ್‌ಎಲ್‌ಸಿಯಲ್ಲಿ ರಾಜ್ಯಕ್ಕೆ ನಾಲ್ಕನೇ ರ‌್ಯಾಂಕ್ ಪಡೆದ ನಿಧಿ, ಉತ್ತಮ ಫಲಿತಾಂಶ ಪಡೆದ ವಿದ್ಯಾರ್ಥಿಗಳು, ಶಿಕ್ಷಕರು, ದಾನಿಗಳನ್ನು ಸನ್ಮಾನಿಸಲಾಯಿತು.

ತಾಪಂ ಮಾಜಿ ಸದಸ್ಯ ಬಂಕ್ರಿಬೀಡು ಮಂಜುನಾಥ್, ಇಒ ನರೇಂದ್ರಕುಮಾರ್, ಯಡೂರು ಗ್ರಾಪಂ ಅಧ್ಯಕ್ಷ ಎಚ್.ಡಿ.ಜಯಪ್ರಕಾಶ್, ಸುಳುಗೋಡು ಗ್ರಾಪಂ ಅಧ್ಯಕ್ಷೆ ಶ್ರುತಿ ಶೇಷಾದ್ರಿ, ಎಸ್‌ಡಿಎಂಸಿ ಅಧ್ಯಕ್ಷ ಸಂದೀಪ್, ಗ್ರಾಪಂ ಸದಸ್ಯ ಸುಧೀರ್, ಮುಖ್ಯ ಶಿಕ್ಷಕಿ ಶಕುಂತಲಾ, ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸಂಪತ್‌ಕುಮಾರ್, ಎ.ಜಿ.ಸದಾನಂದ, ಪ್ರಮುಖರಾದ ಭಾಸ್ಕರ ಜೋಯ್ಸ, ಎಚ್.ಜಿ.ಶಂಕ್ರಪ್ಪ ಗೌಡ, ಶೇಷಾದ್ರಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net