ಶೆಫ್ ಆಗಿ ಪೃಥ್ವಿ ಅಂಬಾರ್! ಈ ಚಿತ್ರ 'ದಿಯಾ' ಮುಂದುವರಿದ ಭಾಗವೇ? ಇಲ್ಲಿದೆ ಮಾಹಿತಿ

ವಿಜಯವಾಣಿ - 2024-01-11T153531.220
Published on

ಬೆಂಗಳೂರು: ಸ್ಯಾಂಡವುಲ್‌ನಲ್ಲಿ 'ದಿಯಾ' ಎಂಬ ಮಧುರ ಪ್ರೇಮ ಕಥೆಯುಳ್ಳ ಸಿನಿಮಾವೊಂದು ತೆರೆಗೆ ಬಂದಿತ್ತು. ಈ ಚಿತ್ರದ ನಾಯಕ ಪೃಥ್ವಿ ಅಂಬಾರ್ ಅದ್ಭುತವಾಗಿ ನಟಿಸುವುದರ ಜತೆಗೆ ತಮ್ಮ ಪಾತ್ರದ ಮುಖೇನ ಅನೇಕ ಸಿನಿಪ್ರೇಕ್ಷಕರ ಮನಗೆದ್ದರು. ಇದೀಗ ಅಂತಹದ್ದೆ ಪ್ರೇಮಕಥೆಯ ಹೊತ್ತುಬಂದಿರುವ 'ಜೂನಿ' ಎಂಬ ಹೊಸ ಸಿನಿಮಾದಲ್ಲಿ ಶೆಫ್ ಆಗಿ ಕಾಣಿಸಿಕೊಂಡಿದ್ದಾರೆ. ಅಸಲಿಗೆ ಈ ಚಿತ್ರದ ಕಥಾಹಂದರವೇನು? ಇದು ದಿಯಾ ಮುಂದುವರಿದ ಭಾಗವೇ? ಎಂಬ ಪ್ರಶ್ನೆಗೆ ಇಲ್ಲಿದೆ ಉತ್ತರ..

ಈಗಾಗಲೇ ಕ್ಯಾರೆಕ್ಟರ್ ಟೀಸರ್ ಅನಾವರಣಗೊಂಡಿದ್ದು, ಈ ಚಿತ್ರದ ಟೀಸರ್ 'ದಿಯಾ' ಸಿನಿಮಾ ಫ್ಲೇವರ್ ಕೊಡುತ್ತಿದೆ ಎಂದು ಹಲವರು ಭಾವಿಸಿದ್ದಾರೆ. ಶೆಫ್ ಅವತಾರದಲ್ಲಿ ಪೃಥ್ವಿ ಅಭಿನಯಿಸಿದ್ದು, ಸಖತ್ ಇಂಪ್ರೆಸಿವ್ ಆಗಿ ಕಾಣಿಸಿಕೊಂಡಿದ್ದಾರೆ. 'ಜನ್ನಿ’ ಎಂಬ ಕಿರುಚಿತ್ರ ನಿರ್ದೇಶಿಸಿದ್ದ ವೈಭವ್ ಮಹಾದೇವ್ ಜೂನಿ ಸಿನಿಮಾ ಮೂಲಕ ನಿರ್ದೇಶಕರಾಗಿ ಮೊದಲ ಹೆಜ್ಜೆ ಇಡುತ್ತಿದ್ದಾರೆ.

ಪ್ರಾಗ್ ಫಿಲ್ಮ್ ಸ್ಕೂಲ್​ನಲ್ಲಿ ನಿರ್ದೇಶಕರ ಕೋರ್ಸ್ ಮುಗಿಸಿರುವ ಅವರೀಗ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ. ವಿಭಿನ್ನ ಟೈಟಲ್ 'ಜೂನಿ' ಸಿನಿಮಾದಲ್ಲಿ ನಾಯಕಿ ರಿಷಿಕಾ ನಾಯಕ್ ನಟಿಸಿದ್ದಾರೆ. ರೋಮ್ಯಾಂಟಿಕ್ ಕಥಾಹಂದರದ ಸಿನಿಮಾ ಇದಾಗಿದ್ದು, ದಿಯಾ ಬಳಿಕ ಪೃಥ್ವಿ ಮತ್ತೊಮ್ಮೆ ಪ್ರೇಮಕಥೆಗೆ ಬಣ್ಣ ಹಚ್ಚಿದ್ದಾರೆ. ಯಾರ ಮೇಲೆ ಪ್ರೀತಿ ಹುಟ್ಟುತ್ತೋ ಅವರ ಮೇಲೆ ಪ್ರೀತಿ ಆಗುತ್ತಾ? ಎಂಬ ಕಥೆಯ ಎಳೆ ಇಟ್ಕೊಂಡು ಚಿತ್ರ ಹೆಣೆಯಲಾಗಿದೆ.

ತ್ರಿಶೂಲ ಕ್ರಿಯೇಷನ್​ನಡಿ ಮೋಹನ್ ಕುಮಾರ್ ಹಣ ಹಾಕಿದ್ದು, ಶ್ರೇಯಸ್ ವೈ.ಎಸ್ ಸಹ ನಿರ್ಮಾಪಕರಾಗಿ ಜವಾಬ್ದಾರಿ ಹೊತ್ತಿದ್ದಾರೆ. ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ಮುಗಿಸಿರುವ ‘ಜೂನಿ’ ಇದೇ ಫೆಬ್ರವರಿ 9ಕ್ಕೆ ತೆರೆಗೆ ಬರಲು ಸಿದ್ಧಗೊಂಡಿದೆ. ನಕುಲ್ ಅಭ್ಯಂಕರ್ ಸಂಗೀತ ನಿರ್ದೇಶನ ಮಾಡಿದ್ದಾರೆ. ಶಶಾಂಕ್ ನಾರಾಯಣ ಸಂಕಲನದ ಜವಾಬ್ದಾರಿ ಹೊತ್ತಿದ್ದು, ಜಿತಿನ್ ದಾಸ್ ಛಾಯಾಗ್ರಹಣ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net