

ಮಹರಾಷ್ಟ್ರ: ಪರತವಾಡ ಧರಣಿ ರಸ್ತೆಯ ಸೇಮದೋಹ್ ಬಳಿ ಖಾಸಗಿ ಬಸ್ 30 ಅಡಿ ಆಳದ ಕಾಲುವೆಗೆ ಬಿದ್ದು, 50- 55 ಮಂದಿ ಪ್ರಯಾಣಿಕರಲ್ಲಿ 4 ಜನ ಸಾವನ್ನಪ್ಪಿದ್ದು, 50 ಮಂದಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಅಪಘಾತದ ವೇಳೆ ಬಸ್‌ನಲ್ಲಿ 50-55 ಮಂದಿ ಪ್ರಯಾಣಿಕರಿದ್ದರು ಎಂದು ತಿಳಿದುಬಂದಿದೆ. ಈ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದು, ಉಳಿದವರು ಗಾಯಗಳೊಂದಿಗೆ ಬದುಕುಳಿದರು.
ಸ್ಥಳೀಯರ ಮಾಹಿತಿ ಮೇರೆಗೆ ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಸಮೀಪದ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಮಹಾರಾಷ್ಟ್ರದ ಅಮರಾವತಿಯಲ್ಲಿ ಕಣಿವೆಗೆ ಬಿದ್ದ ಬಸ್ನಲ್ಲಿದ್ದ ಪ್ರಯಾಣಿಕರ ರಕ್ಷಣಾ ಕಾರ್ಯಾಚರಣೆಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿದೆ. ಆದರೆ, ಈ ಘಟನೆಯ ಸಂಪೂರ್ಣ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.