ಶುಲ್ಕ ಕಡಿತ ವಿರೋಧಿಸಿ ಫೆ.23ಕ್ಕೆ ಖಾಸಗಿ ಶಾಲೆಗಳ ಒಕ್ಕೂಟ ಪ್ರತಿಭಟನೆ

school fees
Published on

ಬೆಂಗಳೂರು: ಕೋವಿಡ್ ಕಾರಣದಿಂದ ಕಗ್ಗಂಟಾಗಿರುವ ಖಾಸಗಿ ಶಾಲೆಗಳ ಶುಲ್ಕ ವಿಚಾರ ಮತ್ತಷ್ಟು ಜಟಿಲವಾಗುವ ಲಕ್ಷಣ ಗೋಚರಿಸುತ್ತಿದೆ. ಆರ್ಥಿಕ ಹಿಂತರಿತ ಪರಿಣಾಮ ಪಾಲಕರು ಶುಲ್ಕ ಕಡಿಮೆ ಮಾಡುವಂತೆ ಸರ್ಕಾರಕ್ಕೆ ಮನವಿ ಮಾಡುತ್ತಿದ್ದಾರೆ. ಇತ್ತ ಖಾಸಗಿ ಶಾಲೆಗಳ ಶಿಕ್ಷಕರಿಗೆ ಆರು ತಿಂಗಳಿಂದ ವೇತನವೂ ಇಲ್ಲದೆ- ಕೆಲಸವೂ ಇಲ್ಲದೆ ಆರ್ಥಿಕ ಸಮಸ್ಯೆ ಎದುರಿಸುತ್ತಿದ್ದಾರೆ.

ಈ ನಡುವೆ ರಾಜ್ಯ ಸರ್ಕಾರ ಖಾಸಗಿ ಶಾಲೆಗಳ ಶುಲ್ಕವನ್ನು ಶೇ.30 ಕಡಿಮೆ ಮಾಡಿ ಆದೇಶ ಹೊರಡಿಸಿದೆ. ಅಲ್ಲದೆ ಯಾವುದೇ ಅಭಿವೃದ್ಧಿ ಶುಲ್ಕವನ್ನು ಪಡೆಯುವಂತಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಇದನ್ನು ವಿರೋಧಿಸಿ ಖಾಸಗಿ ಶಾಲೆಗಳ ಒಕ್ಕೂಟ ಫೆ.23ರಂದು ಪ್ರತಿಭಟನೆ ಹಮ್ಮಿಕೊಂಡಿದೆ.

ಸರ್ಕಾರದ ಈ ನಿರ್ಧಾರವನ್ನು ವಿರೋಧಿಸಿ ಕ್ಯಾಮ್ಸ್, ಮಿಕ್ಸಾ, ಮಾಸ್, ಕುಸುಮ, ಸಿಬಿಎಸ್‌ಇ ಹಾಗೂ ಐಸಿಎಸ್‌ಇ ಶಾಲೆಗಳ ಒಕ್ಕೂಟವು ಪ್ರತಿಭಟನೆಗೆ ನಿರ್ಧರಿಸಿವೆ. ಆದ್ರೆ ಶುಲ್ಕ ಕಡಿತ ವಿಚಾರದಲ್ಲಿ ಶಿಕ್ಷಣ ಇಲಾಖೆಯ ನಿರ್ಧಾರವನ್ನು ಸ್ವಾಗತಿಸಿರುವ ರುಪ್ಸಾ ರಾಜ್ಯಾಧ್ಯಕ್ಷ ಲೋಕೇಶ್ ರುಪ್ಸಾದಲ್ಲಿ 13 ಸಾವಿರಕ್ಕೂ ಹೆಚ್ಚು ಬಜೆಟ್ ಶಾಲೆಗಳಿವೆ. ಶೇ.30 ಶುಲ್ಕ ಕಡಿತದ ಬಗ್ಗೆ ಯಾವುದೇ ತಕರಾರಿ ಇಲ್ಲ ಎಂದಿದ್ದಾರೆ. ಅಲ್ಲದೆ, ಫೆ. 23ರಂದು ನಡೆಯುವ ಪ್ರತಿಭಟನೆ ನಮ್ಮ ಬೆಂಬಲ ಇಲ್ಲ ಎಂದಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net