ಮಗಳೊಂದಿಗೆ ರಾಮನ ದರ್ಶನ ಪಡೆದ ಪ್ರಿಯಾಂಕಾ ಚೋಪ್ರಾ, ನಿಕ್‌ ಜೋನಾಸ್‌ ದಂಪತಿ

Priyanka Chopra
Published on

ಉತ್ತರಪ್ರದೇಶ: ಬಾಲಿವುಡ್​​ ನಟಿ ಪ್ರಿಯಾಂಕಾ ಚೋಪ್ರಾ ಪತಿ, ನಿಕ್ ಜೋನಸ್  ಹಾಗೂ ಮಗಳು ಮಾಲ್ತಿ ಮೇರಿ ಜೋನಾಸ್ ಜೊತೆ ಭಾರತಕ್ಕೆ ಬಂದಿದ್ದಾರೆ. ದೇಸಿ ಗರ್ಲ್ ಪತಿಯೊಂದಿಗೆ ಉತ್ತರ ಪ್ರದೇಶದಲ್ಲಿರುವ ಅಯೋಧ್ಯೆ ರಾಮ ಮಂದಿರಕ್ಕೆ  ಹೋಗಿ ಬಾಲರಾಮನ ದರ್ಶನ ಪಡೆದಿದ್ದಾರೆ. ಈ ಕುರಿತಾದ ಕೆಲವು ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗುತ್ತಿವೆ.

ನಟಿ ಪ್ರಿಯಾಂಕಾ ಚೋಪ್ರಾ ಮತ್ತು ಅವರ ಪತಿ ಪಾಪ್‌ಸ್ಟಾರ್ ನಿಕ್ ಜೋನಾಸ್ ಅವರು ಮಗಳು ಮಾಲ್ತಿ ಮೇರಿಯೊಂದಿಗೆ ಬುಧವಾರ ಅಯೋಧ್ಯೆಗೆ ಭೇಟಿ ಕೊಟ್ಟಿದ್ದಾರೆ. ಪ್ರಿಯಾಂಕಾ ಹಳದಿ ಬಣ್ಣದ ಸೀರೆಯಲ್ಲಿ ಕಾಣಿಸಿಕೊಂಡಿದ್ದರೆ, ನಿಕ್ ಕುರ್ತಾ ಧರಿಸಿದ್ದರು. ರಾಮಮಂದಿರಕ್ಕೆ ಭೇಟಿ ನೀಡಲು ದಂಪತಿ ಅಯೋಧ್ಯೆಗೆ ಆಗಮಿಸಿದ್ದಾರೆ. ಉತ್ತರ ಪ್ರದೇಶದಲ್ಲಿರುವ ಅಯೋಧ್ಯೆ ರಾಮ ಮಂದಿರಕ್ಕೆ ಹೋಗಿ ಬಾಲರಾಮನ ದರ್ಶನ ಪಡೆದರು.

ಬಾಲಿವುಡ್​​ ನಟಿ ಪ್ರಿಯಾಂಕಾ ಚೋಪ್ರಾ ಪತಿ ನಿಕ್ ಜೋನಸ್  ಹಾಗೂ ಮಗಳು ಮಾಲ್ತಿ ಮೇರಿ ಜೋನಸ್ ಜೊತೆ ಭಾರತಕ್ಕೆ ಬಂದಿದ್ದಾರೆ. ಬಲ್ಗರಿ ಬ್ರ್ಯಾಂಡ್ ಅಂಬಾಸಿಡರ್ ಆಗಿರುವ ಪ್ರಿಯಾಂಕಾ ಚೋಪ್ರಾ ಅದೇ ಕಂಪನಿಯ ಇವೆಂಟ್​ನಲ್ಲಿ ಭಾಗಿಯಾಗಲು ಬಂದಿದ್ದಾರೆ.

ಜನವರಿಯಲ್ಲಿ ನಡೆದ ‘ಪ್ರಾಣ ಪ್ರತಿಷ್ಠಾ’ ಸಮಾರಂಭದಲ್ಲಿ ಬಾಲಿವುಡ್​ನ ಖ್ಯಾತ ಸೆಲೆಬ್ರಿಟಿಗಳು ಭಾಗಿಯಾಗಿದ್ದರು. ಪ್ರಿಯಾಂಕಾ ಜನವರಿಯಲ್ಲಿ ಭಾರತದಲ್ಲಿ ಇರಲಿಲ್ಲ. ಹೀಗಾಗಿ ಭೇಟಿ ನೀಡಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಇಂದು ಭೇಟಿ ನೀಡಿ ಬಾಲರಾಮನ ದರ್ಶನ ಪಡೆದಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net