2,750 ಮತಗಳಿಂದ ಭರ್ಜರಿ ಮುನ್ನಡೆ; ಚೊಚ್ಚಲ ಪೈಪೋಟಿಯಲ್ಲಿ ಪ್ರಿಯಾಂಕಾ ಗಾಂಧಿ 'ಕೈ' ಹಿಡಿತಾರಾ ವಯನಾಡು ಜನ?

ವಿಜಯವಾಣಿ - 2024-11-23T082429.107
Published on

ನವದೆಹಲಿ: ವಯನಾಡು ಲೋಕಸಭಾ ಕ್ಷೇತ್ರಕ್ಕೆ ನಡೆದ ಚುನಾವಣೆಯ ಮತ ಎಣಿಕೆ ಈಗಾಗಲೇ ಶುರುವಾಗಿದ್ದು, ಕುತೂಹಲ ಗರಿಗೆದರಿದೆ. ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌ ಅಭ್ಯರ್ಥಿ ಸತ್ಯನ್ ಮೊಕೇರಿ ಮತ್ತು ಎನ್​ಡಿಎ ಅಭ್ಯರ್ಥಿ ನವ್ಯಾ ಹರಿದಾಸ್‌ ವಿರುದ್ಧ ವಾದ್ರಾ ಸ್ಪರ್ಧೆಗೆ ಇಳಿದಿದ್ದಾರೆ. ಈ ವರ್ಷದ ಆರಂಭದಲ್ಲಿ ಸಹೋದರ ರಾಹುಲ್​ ಗಾಂಧಿ ತಮ್ಮ ಸ್ಥಾನವನ್ನು ಬಿಟ್ಟುಕೊಟ್ಟ ಬೆನ್ನಲ್ಲೇ ತಮ್ಮ ಚೊಚ್ಚಲ ಪೈಪೋಟಿಯನ್ನು ವಯನಾಡಿನಿಂದ ಆರಂಭಿಸಿದ್ದಾರೆ.

ಪ್ರಸ್ತುತ ಮತ ಎಣಿಕೆ ಪ್ರಕ್ರಿಯೆ ಆರಂಭಗೊಂಡಿದ್ದು, ಪೊಲೀಸರ ಬಿಗಿ ಬಂದೋಬಸ್ತ್​ನಡಿ ಕೇಂದ್ರಗಳಲ್ಲಿ ಎಣಿಕೆ ನಡೆಯುತ್ತಿದೆ. ಈಗಾಗಲೇ ಬಿರುಸಿನ ಪ್ರಚಾರ ಮುಕ್ತಾಯ ಮಾಡಿರುವ ಪ್ರಿಯಾಂಕಾ, ಜನರ ಬಳಿ ತನ್ನನ್ನು ಗೆಲ್ಲಿಸುವಂತೆ ವಯನಾಡು ಜನತೆಯಲ್ಲಿ ಮನವಿ ಮಾಡಿದ್ದಾರೆ.

ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಪ್ರಿಯಾಂಕಾ, ದೆಹಲಿಯ ಸಂಸತ್ತಿನಲ್ಲಿ ನಿಮ್ಮನ್ನು ಪ್ರತಿನಿಧಿಸಲು ನನಗೊಂದು ಅವಕಾಶ ಮಾಡಿಕೊಡಿ ಎಂದು ಕೇಳಿರುವುದು ಜನರಲ್ಲಿ ಯಾವ ಭರವಸೆಯನ್ನು ನೀಡಿದೆ ಎಂಬುದು ಇಂದಿನ ಫಲಿತಾಂಶದಲ್ಲಿ ಸ್ಪಷ್ಟವಾಗಲಿದೆ. ಸದ್ಯ ಅಂಚೆ ಮತ ಎಣಿಕೆ ಮುಗಿದಿದ್ದು, 2,750 ಮತಗಳ ಭರ್ಜರಿ ಮುನ್ನಡೆ ಸಾಧಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net