ಪ್ರಿಯಾಂಕಾ ನಟನೆಯ 'ಕ್ಯಾಪ್ಚರ್' ಚಿತ್ರದ 60 ಅಡಿ ಎತ್ತರದ ಟೈಟಲ್ ಪೋಸ್ಟರ್ ಲಾಂಚ್​​​

cap
Published on

Capture movie poster launch: ಪ್ರಿಯಾಂಕಾ ಉಪೇಂದ್ರ ಸಾಕಷ್ಟು ಹಾರರ್​​​ ಚಿತ್ರಗಳಲ್ಲಿ ನಟಿಸಿದ್ದಾರೆ. ವಿಭಿನ್ನ ಪಾತ್ರಗಳ ಮೂಲಕ ತನ್ನದೇ ಆದ ಸ್ಟೈಲ್​ ಹೊಂದಿದ್ದಾರೆ. ಇದೀಗ ಪ್ರಿಯಾಂಕಾ ಮತ್ತೊಂದು ಹಾರರ್​​ ಸಿನಿಮಾದಲ್ಲೇ ತೆರೆ ಮೇಲೆ ಬರೋಕೆ ರೆಡಿಯಾಗಿದ್ದಾರೆ.


ಪ್ರಿಯಾಂಕಾ ಉಪೇಂದ್ರ ನಟಿಸುತ್ತಿರುವ ಹೊಸ ಸಿನಿಮಾದ ಹೆಸರು ''ಕ್ಯಾಪ್ಚರ್'. ಸದ್ಯ ಕ್ಯಾಪ್ಚರ್​ ಸಿನಿಮಾದ ತಂಡ ಸ್ಯಾಂಡಲ್‌ವುಡ್‌ನಲ್ಲೇ ಮೊದಲ ಬಾರಿಗೆ ನಾಯಕಿಯೊಬ್ಬರ ಪೋಸ್ಟರ್ ಅನ್ನು ಇಷ್ಟು ದೊಡ್ಡ ಮಟ್ಟದಲ್ಲಿ 60 ಅಡಿಯ ಕಟೌಟ್ ನಿಲ್ಲಿಸುವ ಮೂಲಕ ಬಿಡುಗಡೆ ಮಾಡಿರುವುದು ವಿಶೇಷ.


ನ್ನಡ ಸಿನಿಮಾರಂಗದಲ್ಲಿಯೇ ಇದೊಂದು ಹೊಸ ಪ್ರಯತ್ನವಾಗಿದ್ದು, ಈ ಸಿನಿಮಾಗೆ ಮಮ್ಮಿ, ದೇವಕಿ ಸಿನಿಮಾ ಖ್ಯಾತಿಯ ನಿರ್ದೇಶಕ ಲೋಹಿತ್ ಆಕ್ಷನ್ ಕಟ್ ಹೇಳಿದ್ದಾರೆ.


ಪ್ರಿಯಾಂಕಾ ಮತ್ತು ಲೋಹಿತ್ ಕಾಂಬಿನೇಷನ್‌ನ 3ನೇ ಸಿನಿಮಾ ಇದಾಗಿದ್ದು, ಕ್ಯಾಪ್ಟರ್ ಸಿನಿಮಾವನ್ನು ರವಿರಾಜ್ ಅವರು ತಮ್ಮ ಶ್ರೀ ದುರ್ಗಪರಮೇಶ್ವರಿ ಪ್ರೊಡಕ್ಷನ್ ಮೂಲಕ ನಿರ್ಮಾಣ ಮಾಡುತ್ತಿದ್ದಾರೆ. ಈ ಬ್ಯಾನರ್‌ನಲ್ಲಿ ಮೂಡಿಬರುತ್ತಿರುವ ಮೊದಲ ಸಿನಿಮಾ ಇದಾಗಿದೆ.


ಪ್ರಿಯಾಂಕಾ ಉಪೇಂದ್ರ ಅವರ 60 ಅಡಿ ಕೌಟೌಟ್ ಪೋಸ್ಟರನ್ನ ವೀರೇಶ್​​ ಚಿತ್ರಮಂದಿರದ ಮುಂದೆ ನಿಲ್ಲಿಸಲಾಗಿದ್ದು, ಸಿನಿಮಾದ ಟೈಟಲ್ ಪೋಸ್ಟರ್ ರಿವೀಲ್ ಮಾಡಲಾಯಿತು.


ಪ್ರಿಯಾಂಕಾ ಅವರ ಪತಿ ಹಾಗೂ ಚಂದನವನದ ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಕ್ಯಾಪ್ಚರ್ ಚಿತ್ರದ ಪೋಸ್ಟರ್ ಲಾಂಚ್ ಮಾಡಿದ್ದಾರೆ.


ಚಿತ್ರಕ್ಕೆ ಎಸ್. ಪಾಂಡಿಕುಮಾರ್ ಕ್ಯಾಮೆರಾ ವರ್ಕ್ ಮಾಡಿದ್ದು ರವಿಚಂದ್ರನ್ ಅವರ ಸಂಕಲನವಿದೆ. ಪ್ರಿಯಾಂಕ ಉಪೇಂದ್ರ ಅವರೊಂದಿಗೆ ಇನ್ನು ಸಾಕಷ್ಟು ಸ್ಟಾರ್ ಕಲಾವಿದರು ಸಿನಿಮಾದಲ್ಲಿ ಕಾಣಿಸಿಕೊಂಡಿದ್ದಾರೆ.ಎಲ್ಲವೂ ಅಂದುಕೊಂಡಂತೆ ಆದರೆ ಸಿನಿಮಾ ಮುಂದಿನ ತಿಂಗಳು ನವೆಂಬರ್‌ನಲ್ಲಿ ರಿಲೀಸ್​ ಆಗಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net