'ಎಂಬತ್ತೆರಡು ವರ್ಷದ ಹಿರಿಯ ನಾಯಕನಿಗೆ ಅಪಮಾನ ಮಾಡಿದ್ದೀರಿ': ನಡ್ಡಾ ಮೇಲೆ ಪ್ರಿಯಾಂಕಾ ಕಿಡಿಕಾರಿದ್ದು ಏಕೆ?

Priyanka Gandhi
Published on

ನವದೆಹಲಿ: ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ವಿರುದ್ಧದ ಬಿಜೆಪಿ ನಾಯಕರ ಟೀಕೆಗಳ ಕುರಿತು ಕಾಂಗ್ರೆಸ್​ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿದ್ದಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಟೀಕಿಸಿದ್ದನ್ನು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ತೀವ್ರವಾಗಿ ಟೀಕಿಸಿದ್ದಾರೆ.

ಎಂಬತ್ತೆರಡು ವರ್ಷದ ಹಿರಿಯ ಸಾರ್ವಜನಿಕ ನಾಯಕನಿಗೆ ಅಗೌರವ ತೋರುವ ಅಗತ್ಯ ಏನಿತ್ತು? ಪ್ರಶ್ನಿಸುವುದು ಪ್ರಜಾಪ್ರಭುತ್ವದ ಸಂಪ್ರದಾಯ ಮತ್ತು ಸಂಸ್ಕೃತಿ. ಆದರೆ ಪ್ರಶ್ನೆಗಳನ್ನು ಕೇಳುವುದೇ ತಪ್ಪು ಎನ್ನುವುದಾದರೆ ಪ್ರಜಾಪ್ರಭುತ್ವಕ್ಕೆ ಅರ್ಥವಿದೆಯೇ ಎಂದು ಪ್ರಶ್ನಿಸಿದ್ದಾರೆ.

ಬಿಜೆಪಿ ನಾಯಕ ಮತ್ತು ಕೇಂದ್ರ ಸಚಿವ ರವನೀತ್ ಸಿಂಗ್ ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿಯನ್ನು ದೇಶದ ದೊಡ್ಡ ಭಯೋತ್ಪಾದಕ ಎಂದು ಕರೆದಿದ್ದರು. ಇಂತಹ ಟೀಕೆಗಳನ್ನು ನಿಲ್ಲಿಸುವಂತೆ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿದ್ದರು. ಖರ್ಗೆ ಪತ್ರಕ್ಕೆ ನಡ್ಡಾ ತೀವ್ರ ಟೀಕೆ ಮಾಡಿದ್ದರು. ಇದೀಗ ಜೆಪಿ ನಡ್ಡಾ ಹೇಳಿಕೆಗೆ ಪ್ರಿಯಾಂಕಾ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net