ಪ್ರಾಥಮಿಕ ಶಾಲಾ ಶಿಕ್ಷಕರ ಬಡ್ತಿಗೆ ಪ್ರಕ್ರಿಯೆ ಆರಂಭ

School Teacher
ಸಾಂದರ್ಭಿಕ ಚಿತ್ರ
Published on

ಬೆಂಗಳೂರು ಶಾಲಾ ಶಿಕ್ಷಣ ಇಲಾಖೆ 2023-24ನೇ ಸಾಲಿನ ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲಾ ಸಹ ಶಿಕ್ಷಕರಿಗೆ ಮುಖ್ಯ ಶಿಕ್ಷಕರ ಹುದ್ದೆಗೆ ಮತ್ತು ಮುಖ್ಯ ಶಿಕ್ಷಕರಿಗೆ ಹಿರಿಯ ಮುಖ್ಯ ಶಿಕ್ಷಕರ ಹುದ್ದೆಗೆ ಬಡ್ತಿ ನೀಡುವ ಕುರಿತು ಪೂರ್ವಭಾವಿ ಸಿದ್ಧತೆ ಮಾಡಿಕೊಳ್ಳುವುದರ ಜತೆಗೆ ಬಡ್ತಿ ಪ್ರಕ್ರಿಯೆ ಚಾಲನೆ ನೀಡುವಂತೆ ಶಾಲಾ ಶಿಕ್ಷಣ ಸೂಚನೆ ನೀಡಿದೆ.

ಬಡ್ತಿ ಪ್ರಕ್ರಿಯೆ ಕೌನ್ಸೆಲಿಂಗ್ ಕೈಗೊಳ್ಳುವಾಗ ಕೆಲವು ಮಾರ್ಗಸೂಚಿಗಳನ್ನು ಅನುಸರಿಸುವಂತೆ ಸೂಚಿಸಿದೆ.

ಇದರ ಜತೆಗೆ ಮುಖ್ಯ ಶಿಕ್ಷಕರು ಮತ್ತು ಹಿರಿಯ ಮುಖ್ಯ ಶಿಕ್ಷಕರ ಹುದ್ದೆಗಳಿಗೆ ಬಡ್ತಿ ಪೂರಕವಾದ ವೇಳಾಪಟ್ಟಿಯನ್ನು ರೂಪಿಸಿದೆ. ಜ.12ರಂದು ಬಡ್ತಿಗೆ ಅರ್ಹರಿರುವ ಶಿಕ್ಷಕರ ತಾತ್ಕಾಲಿಕ ಅಂತಿಮ ಅದ್ಯತಾ ಪಟ್ಟಿ ಪ್ರಕಟಣೆ ಮಾಡಲಿದೆ. ಜ.30ರಂದು ‘ಬಿ’ ವಲಯದಿಂದ ‘ಎ’ ವಲಯಕ್ಕೆ ಮುಖ್ಯ ಶಿಕ್ಷಕರು ಮತ್ತು ಹಿರಿಯ ಮುಖ್ಯ ಶಿಕ್ಷಕರಿಗೆ ವರ್ಗಾವಣೆ ಕೌನ್ಸೆಲಿಂಗ್ ನಡೆಯಲಿದೆ. ಸಂಪೂರ್ಣ ಮಾಹಿತಿಯನ್ನು ಇಲಾಖೆಯ ವೆಬ್‌ಸೈಟ್‌  https://schooleducation.karnataka.gov.in

ನಲ್ಲಿ ನೋಡಬಹುದಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net