

ಸರಗೂರು: ತಾಲೂಕಿನ ಬಿ.ಮಟಕರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದ ವಲಯ ಮಟ್ಟದ ಪ್ರಾಥಮಿಕ ಆರೋಗ್ಯ ಕೇಂದ್ರವಾರು ಪ್ರಗತಿ ಪರಿಶೀಲನಾ ಸಭೆಗೆ ಜಿಲ್ಲಾ ಆರೋಗ್ಯವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಸುವರ್ಣ ಹಾಗೂ ತಾಲೂಕು ಆರೋಗ್ಯಾಧಿಕಾರಿ ಡಾ.ರವಿಕುಮಾರ್ ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬಡಗಲಪುರ, ಬಿ.ಮಟಕೆರೆ, ದಡದಹಳ್ಳಿ ಆರೋಗ್ಯ ಕೇಂದ್ರ ವ್ಯಾಪ್ತಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ಎಲ್ಲ ರಾಷ್ಟ್ರೀಯ ಕಾರ್ಯಕ್ರಮಗಳ ಪ್ರಗತಿಯನ್ನು ಪರಿಶೀಲಿಸಿದರು.
ಬಿ.ಮಟಕೆರೆ ಹಾಡಿಗೆ ಭೇಟಿ ನೀಡಿ ರಾಷ್ಟ್ರೀಯ ಕಾರ್ಯಕ್ರಮಗಳ ಅಡಿಯಲ್ಲಿ ಬರುವ ಚುಚ್ಚುಮದ್ದನ್ನು ಮಕ್ಕಳಿಗೆ ನೀಡಿದ್ದಾರೆಯೇ ಎಂದು ಪರಿಶೀಲಿಸಿದರು. ಗ್ರಾಮದಲ್ಲಿ ಜನರಿಗೆ ರಾಷ್ಟ್ರೀಯ ಕಾರ್ಯಕ್ರಮಗಳ ಬಗ್ಗೆ ಮತ್ತು ಸೊಳ್ಳೆ ನಿಯಂತ್ರಣದ ಬಗ್ಗೆ ಮಾಹಿತಿ ನೀಡಿದರು.
ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾಚಂದ್ರಶೇಖರ್, ಡಾ. ಅಖಿಲಾ, ಡಾ.ಮನೋಹರ್, ಸಿಬ್ಬಂದಿ ಇದ್ದರು.