ನೌಕರರ ಸಂಘಕ್ಕೆ ಆಡಳಿತಾಧಿಕಾರಿ ನೇಮಕಕ್ಕೆ ತಡೆ

highcourt
Published on

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ ಆಡಳಿತಾಧಿಕಾರಿ ನೇಮಕ ಮಾಡಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.

ಈ ಕುರಿತಾಗಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಸಲ್ಲಿಸಿದ್ದ ತಕರಾರರು ಅರ್ಜಿಯನ್ನು ನ್ಯಾಯಮೂರ್ತಿ ಹೇಮಂತ ಚಂದನ ಗೌಡರ್ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.

ಅರ್ಜಿ ಆಲಿಸಿದ ನ್ಯಾಯಪೀಠ, ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ ಆಡಳಿತಾಧಿಕಾರಿಯನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಅ.7ರಂದು ಹೊರಡಿಸಿದ್ದ ಆದೇಶಕ್ಕೆ ಮಧ್ಯಂತರ ತಡೆ ನೀಡಿ ವಿಚಾರಣೆಯನ್ನು ಅ.16ಕ್ಕೆ ಮುಂದೂಡಿತು.

ರಾಜ್ಯ ಸರ್ಕಾರಿ ನೌಕರರ ಸಂಘದ ಆಡಳಿತ ಮಂಡಳಿ ಅವಧಿ ಮುಕ್ತಾಯಗೊಂಡಿರುವುದರಿಂದ, ಸಂಘದ ಸದಸ್ಯರು ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಹೊಸ ಆಡಳಿತ ಮಂಡಳಿ ರಚನೆಯಾಗುವವರೆಗೆ ಕೆಎಎಸ್ ಅಧಿಕಾರಿ ಸಿ.ಎನ್. ಮಂಜುನಾಥ್ ಅವರನ್ನು ಆಡಳಿತಾಧಿಕಾರಿಯನ್ನಾಗಿ ನೇಮಕ ಮಾಡಿ ಸಹಕಾರ ಇಲಾಖೆ ಅ.7ರಂದು ಆದೇಶ ಹೊರಡಿಸಿತ್ತು. ಅದನ್ನು ಪ್ರಶ್ನಿಸಿ ಸರ್ಕಾರಿ ನೌಕರರ ಸಂಘ ಹೈಕೋರ್ಟ್ ಮೆಟ್ಟಿಲೇರಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net