

ಆಂಧ್ರಪ್ರದೇಶ: ಟಾಲಿವುಡ್ನ ಡಾರ್ಲಿಂಗ್ ಪ್ರಭಾಸ್ ಮತ್ತು ಬಾಲಿವುಡ್ ಬೆಡಿಗಿ ದೀಪಿಕಾ ಪಡುಕೋಣೆ ನಟನೆಯ ಬಹುನಿರೀಕ್ಷಿತ ಸೈನ್ಸ್-ಫಿಕ್ಷನ್ 'ಪ್ರಾಜೆಕ್ಟ್ ಕೆ' ಚಿತ್ರದ ಫಸ್ಟ್ ಲುಕ್ ರಿಲೀಸ್ ದಿನಾಂಕವನ್ನು ಇದೀಗ ಚಿತ್ರತಂಡ ಅಧಿಕೃತವಾಗಿ ಪ್ರಕಟಿಸಿದೆ.
ಬಹಳ ಕಾತರದಿಂದ ಕಾಯುತ್ತಿರುವ 'ಪ್ರಾಜೆಕ್ಟ್ ಕೆ' ಚಿತ್ರದ ಫಸ್ಟ್ ಲುಕ್ ಅನ್ನು ಸ್ಯಾನ್ ಡಿಯಾಗೋ ಕಾಮಿಕ್‌ನಲ್ಲಿ ಜುಲೈ 20 ರಂದು ಅನಾವರಣಗೊಳಿಸಲು ಚಿತ್ರತಂಡ ಸಜ್ಜಾಗಿದೆ. ರೆಬಲ್ ಸ್ಟಾರ್ ಪ್ರಭಾಸ್ ಅಭಿನಯದ ಈ ಸಿನಿಮಾದಲ್ಲಿ ದೀಪಿಕಾ ಪಡುಕೋಣೆ, ಕಮಲ್ ಹಾಸನ್ ಮತ್ತು ರಾಣಾ ದಗ್ಗುಬಾಟಿ ಸೇರಿದಂತೆ ಪ್ರತಿಭಾವಂತ ಕಲಾವಿದರ ತಂಡವೇ ನಟಿಸಿದೆ.
ನಾಗ್ ಅಶ್ವಿನ್ ನಿರ್ದೇಶನದ ಮತ್ತು ಅಶ್ವಿನಿ ದತ್ ನಿರ್ಮಾಣದ 500 ಕೋಟಿ ಬಜೆಟ್ನ ಈ ಚಿತ್ರವು ಜನವರಿ 12, 2024 ರಂದು ವಿಶ್ವಾದ್ಯಂತ ಬಹುತೇಕ ಚಿತ್ರಮಂದಿರಗಳಲ್ಲಿ ಏಕಕಾಲಕ್ಕೆ ರಿಲೀಸ್ ಆಗಲಿದೆ ಎಂದು ವರದಿ ಹೇಳಿದೆ,(ಏಜೆನ್ಸೀಸ್).